ಶಿವಮೊಗ್ಗ | ಪೊಲೀಸರ ಮೇಲೆ ದಾಳಿ: ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧನ

Update: 2022-12-19 06:13 GMT

ಶಿವಮೊಗ್ಗ | ಪೊಲೀಸರ ಮೇಲೆ ದಾಳಿ: ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧನ

ಶಿವಮೊಗ್ಗ: ಕಾರಿಗೆ ಬೆಂಕಿ ಹಚ್ಚಿದ್ದ ಪ್ರಕರಣ ಸಂಬಂಧ ಬಂಧಿಸಿಲು ತೆರಳಿದ್ದಾಗ ಪೊಲೀಸರ ಮೇಲೆ ದಾಳಿ ನಡೆಸಿದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಸೋಮವಾರ ನಡೆದಿರುವುದಾಗಿ ವರದಿಯಾಗಿದೆ.

ಪ್ರವೀಣ್ ಅಲಿಯಾಸ್ ಮೋಟು ಪ್ರವೀಣ್ ಎಂಬಾತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಸೋಮವಾರ ಬೆಳಗ್ಗೆ ಪ್ರವೀಣ್ ನನ್ನು ಬಂಧಿಸಲು ಪೊಲೀಸರ ತಂಡ ತೆರಳಿತ್ತು. ಈ ವೇಳೆ ಪೊಲೀಸ್ ಸಿಬ್ಬಂದಿ ಶಿವರಾಜು ಅವರ ಮೇಲೆ ಆರೋಪಿ ಪ್ರವೀಣ್ ದಾಳಿ ನಡೆಸಿ, ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಶಿವಮೊಗ್ಗ ಗ್ರಾಮಾಂತರ ಠಾಣೆ ಪಿಎಸ್ಐ ರಮೇಶ್ ಅವರು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಬಳಿಕ ಪ್ರವೀಣ್ ನ ಕಾಲಿಗೆ ಗುಂಡು ಹಾರಿಸಿದ್ದಾರೆ.

ಪೊಲೀಸ್ ಸಿಬ್ಬಂದಿ ಶಿವರಾಜು ಮತ್ತು ಆರೋಪಿ ಪ್ರವೀಣ್ ನನ್ನು ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಪೊಲೀಸ್ ಸಿಬ್ಬಂದಿ ಶಿವರಾಜು ಅವರನ್ನು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆರೋಪಿ ಪ್ರವೀಣನನ್ನು ಮೆಗ್ಗಾನ್ ಆಸ್ಪತ್ರೆಯ ಜೈಲ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Similar News