×
Ad

ಗದಗ: ಶಿಕ್ಷಕನಿಂದ ಮಾರಣಾಂತಿಕ ಹಲ್ಲೆ; 4ನೇ ತರಗತಿ ವಿದ್ಯಾರ್ಥಿ ಮೃತ್ಯು

ಬಾಲಕನನ್ನು ಶಾಲಾ ಕಟ್ಟಡದಿಂದ ಹೊರಕ್ಕೆಸೆದ ಆರೋಪಿ ಶಿಕ್ಷಕನ ಬಂಧನ

Update: 2022-12-19 19:14 IST

ಗದಗ, ಡಿ. 19:  ಸರ್ಕಾರಿ ಶಾಲೆಯೊಂದರ ಶಿಕ್ಷಕ ವಿದ್ಯಾರ್ಥಿಯೋರ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಶಾಲೆಯ ಕಟ್ಟಡದ ಮೊದಲ ಮಹಡಿಯಿಂದ ಎಸೆದ ಪರಿಣಾಮ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ವರದಿಯಾಗಿದೆ. 

4ನೇ ತರಗತಿ ವಿದ್ಯಾರ್ಥಿ ಭರತ್ ಮೃತ ಬಾಲಕ ಎಂದು ಗುರುತಿಸಲಾಗಿದೆ. 

ಹಗ್ಲಿ ಗ್ರಾಮದ ಆದರ್ಶ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕ ಮುತ್ತಪ್ಪ ಬಾಲಕನಿಗೆ ಕಬ್ಬಿಣದ ರಾಡ್ ನಿಂದ  ಹೊಡೆದಿದ್ದನೆನ್ನಲಾಗಿದ್ದು, ಬಳಿಕ ಶಾಲೆಯ ಕಟ್ಟಡದ ಮೊದಲ ಮಹಡಿಯಿಂದ ಹೊರಗೆ ಎಸೆದಿದ್ದಾನೆ ಎಂದು ಹೇಳಲಾಗಿದೆ.  

ಸದ್ಯ ಆರೋಪಿ ಶಿಕ್ಷಕ ಮುತ್ತಪ್ಪನನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. 

ಮೃತ ಬಾಲಕನ ತಾಯಿಯೂ ಅದೇ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು, ಅವರ ಮೇಲೂ ಆರೋಪಿ ಹಲ್ಲೆ ನಡೆಸಿದ್ದಾನೆನ್ನಲಾಗಿದ್ದು, ಗಂಭೀರ ಗಾಯಗೊಂಡ ಶಿಕ್ಷಕಿಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಇದನ್ನೂ ಓದಿ: ದರ್ಶನ್ ಮೇಲೆ ಚಪ್ಪಲಿ ಎಸೆತ: ನಟ ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ...

Similar News