×
Ad

ಜನರಿಗೆ ಬಿಜೆಪಿ ಸರಕಾರದ ಹಿಡನ್ ಅಜೆಂಡಾ ತಿಳಿದಿದೆ: ರೋಝಿ ಜಾನ್

Update: 2022-12-19 23:50 IST

ಕುಂದಾಪುರ, ಡಿ.19: 40 ಪರ್ಸೆಂಟ್ ಕಮಿಶನ್ ಒಳಗೆ ಮುಳುಗಿ ಹೋಗಿ ರುವ ಬಿಜೆಪಿ ಸರಕಾರವನ್ನು ಕಿತ್ತೆಸೆಯುವ ಕಾಲ ಬಂದಿದೆ. ನಮ್ಮ ರಾಜ್ಯಕ್ಕೆ ಬಿಜೆಪಿ ಸರಕಾರದ ಕೊಡುಗೆ ಶೂನ್ಯ. ಜನರಿಗೆ ಬಿಜೆಪಿ ಸರಕಾರದ ಹಿಡನ್ ಅಜೆಂಡಾ ಗೊತ್ತಾಗಿದೆ. ಹೀಗಾಗಿ ರಾಜ್ಯದ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ ಎಂದು ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಕಾರ್ಯದರ್ಶಿ, ಮೈಸೂರು ವಿಭಾಗದ ಕಾಂಗ್ರೆಸ್ ಉಸ್ತುವಾರಿ ರೋಝಿ ಜಾನ್ ಆರೋಪಿಸಿದ್ದಾರೆ.

ಕೊಲ್ಲೂರಿನ ಎಎನ್‌ಆರ್ ಅತಿಥಿ ಗೃಹದಲ್ಲಿ ಸೋಮವಾರ ನಡೆದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ಹಾಗೂ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಪಕ್ಷದ ನಾಯಕರ ಹಾಗು ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ಕಾಂಗ್ರೆಸ್‌ನಿಂದ ಮಾತ್ರ ರಾಜ್ಯದ ಅಭಿವೃದ್ದಿ ಸಾಧ್ಯ ಎನ್ನುವುದು ಜನರಿಗೆ ತಿಳಿದಿದೆ. ರಾಜ್ಯದಲ್ಲಿ ಸಂಪೂರ್ಣ ಕಾಂಗ್ರೆಸ್ ಪರ ಅಲೆ ಇದ್ದು, ಬದಲಾವಣೆ ತರುವುದು ನಮ್ಮೆಲ್ಲರ ಜವಾಬ್ದಾರಿ. ಚುನಾವಣಾ ತಯಾರಿಗೆ ಇದು ಮಹತ್ವಪೂರ್ಣ ಸಮಯ. ಬೂತ್ ಮಟ್ಟದಲ್ಲಿ ಕೆಲಸ ಮಾಡಿದರೆ ಮಾತ್ರ ನಾವು ಅಧಿಕಾರಕ್ಕೆ ಬರಲು ಸಾಧ್ಯ. ಜನರ ನಿರೀಕ್ಷೆಗಳನ್ನು ಪೂರ್ತಿಗೊಳಿಸುವುದಕ್ಕಾಗಿ ನಾವೆಲ್ಲರೂ ಶ್ರಮವಹಿಸಿ ಕೆಲಸ ಮಾಡಿದರೆ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಮಾತನಾಡಿ, ಚುನಾವಣೆ ಸಮೀಪಿಸುತ್ತಿದ್ದು, ಬೂತ್ ಮಟ್ಟದಲ್ಲಿ ಏಜೆಂಟರುಗಳನ್ನು ಕೂಡಲೇ ನೇಮಕ ಮಾಡಬೇಕು. ರಾಜ್ಯದಲ್ಲಿ 37ಲಕ್ಷ ಮತದಾರರ ಮತದಾನವನ್ನು ಕಸಿಯುವ ಕೆಲಸ ರಾಜ್ಯ ಬಿಜೆಪಿ ಸರಕಾರ ಮಾಡಿದೆ. ಈಗಾಗಲೇ ಇಬ್ಬರು ಐಎಎಸ್ ಅಧಿಕಾರಿಗಳನ್ನು ಕೇಂದ್ರ ಚುನಾವಣಾ ಆಯೋಗ ವಜಾಗೊಳಿಸಿದೆ. ಬೆಂಗಳೂರು ನಗರದಲ್ಲೇ 7 ಲಕ್ಷ ಮತದಾರರು ಹಕ್ಕನ್ನು ಕಸಿದುಕೊಂಡಿದೆ ಎಂದು ತಿಳಿಸಿದರು.

ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ವಿಧಾನ ಪರಿಷತ್ ಸದಸ್ಯ ಮಂಜು ನಾಥ ಭಂಡಾರಿ, ಕೆಪಿಸಿಸಿ ಕಾರ್ಯದರ್ಶಿ ಎಂ.ಎಗಫೂರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್, ಜಿಪಂ ಮಾಜಿ ಅಧ್ಯಕ್ಷ ರಾಜು ಪೂಜಾರಿ, ಕೆಪಿಸಿಸಿ ಸದಸ್ಯರಾದ ಪ್ರಕಾಶ್ಚಂದ್ರ ಶೆಟ್ಟಿ, ಮುಖಂಡರಾದ ರಮೇಶ್ ಗಾಣಿಗ, ಪ್ರಸನ್ನ ಕುಮಾರ್ ಶೆಟ್ಟಿ, ಅರುಣ್ ಕುಮಾರ್ ಶೆಟ್ಟಿ, ಬೈಂದೂರು ಬ್ಲಾಕ್ ಪ್ರಧಾನ ಕಾರ್ಯದರ್ಶಿ ಅರವಿಂದ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಬಿಜೆಪಿಗೆ ಇಂದು ಜನರೆದುದುರು ಬರುವ ಯಾವುದೇ ನೈತಿಕತೆ ಇಲ್ಲ. ಅಭಿವೃದ್ದಿ ವಿಚಾರಗಳ ಕುರಿತು ಮಾತನಾಡದೆ ಧಾರ್ಮಿಕ ಭಾವನೆ ಕೆರಳಿಸುವ, ನಮ್ಮ ನಾಯಕರನ್ನು ನಿಂದಿಸುವ ಕೆಲಸ ನಡೆಸುತ್ತಿದ್ದಾರೆ.

ಆರ್.ಧ್ರುವನಾರಾಯಣ್, ಕೆಪಿಸಿಸಿ ಕಾರ್ಯಾಧ್ಯಕ್ಷರು

Similar News