×
Ad

ಕಾಸರಗೋಡು | ರಸ್ತೆ ಅಪಘಾತ: ವಿದ್ಯಾರ್ಥಿ ಮೃತ್ಯು

Update: 2022-12-20 11:43 IST

ಕಾಸರಗೋಡು: ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಢಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಬೇಕಲ ಸಮೀಪದ  ಪಳ್ಳಿಕೆರೆಯಲ್ಲಿ ಮಂಗಳವಾರ ನಡೆದಿರುವುದಾಗಿ ವರದಿಯಾಗಿದೆ.

ಬೇಕಲ ಮವ್ವಾಲ್ ನಿವಾಸಿ, ಚಂದ್ರಗಿರಿ ಕಾಲೇಜಿನ ಪ್ಲಸ್ ವನ್  ವಿದ್ಯಾರ್ಥಿ ಅಸ್ಬಾಕ್ (18) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಅಸ್ಬಾಕ್ ಅವರು ಕಾಲೇಜ್ ಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಅಡುಗೆ ಅನಿಲ ಸಿಲಿಂಡರ್ ಹೇರಿಕೊಂಡು ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದು ಈ ಅಪಘಾತ ನಡೆದಿದೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅಸ್ಬಾಕ್ ರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Similar News