ಬಾಂಗ್ಲಾದೇಶ ವಿರುದ್ಧ ಎರಡನೇ ಟೆಸ್ಟ್: ರೋಹಿತ್ ಶರ್ಮಾ ಅಲಭ್ಯ

Update: 2022-12-20 08:14 GMT

ಹೊಸದಿಲ್ಲಿ: ಭಾರತದ ನಾಯಕ ರೋಹಿತ್ ಶರ್ಮಾ ಡಿಸೆಂಬರ್ 7 ರಂದು ನಡೆದ ಎರಡನೇ ಏಕದಿನ ಪಂದ್ಯದ ವೇಳೆ ಆಗಿರುವ  ಹೆಬ್ಬೆರಳಿನ ಗಾಯದಿಂದ ಸಾಕಷ್ಟು ಚೇತರಿಸಿಕೊಳ್ಳಲು ವಿಫಲರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ ಢಾಕಾದಲ್ಲಿ ಆರಂಭವಾಗಲಿರುವ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.

ಢಾಕಾದಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ 2ನೇ ಏಕದಿನ ಪಂದ್ಯದ ವೇಳೆ ಎಡಗೈ ಹೆಬ್ಬೆರಳಿಗೆ ಗಾಯವಾದ ಹಿನ್ನೆಲೆಯಲ್ಲಿ ರೋಹಿತ್ ಶರ್ಮಾ ಬಿಸಿಸಿಐ ವೈದ್ಯಕೀಯ ತಂಡದ ಆರೈಕೆಯಲ್ಲಿದ್ದಾರೆ.  ಎರಡನೇ ಟೆಸ್ಟ್‌ನಲ್ಲಿ ರೋಹಿತ್  ಹಾಗೂ ವೇಗದ ಬೌಲರ್  ನವದೀಪ್ ಸೈನಿ ಕೂಡ ಲಭ್ಯವಿರುವುದಿಲ್ಲ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.

ಕಿಬ್ಬೊಟ್ಟೆಯ ಸ್ನಾಯು ಸೆಳೆತದಿಂದಾಗಿ ನವದೀಪ್ ಸೈನಿ ಎರಡನೇ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ. ವೇಗದ ಬೌಲರ್ ಈಗ ತನ್ನ ಗಾಯದ ಹೆಚ್ಚಿನ ನಿರ್ವಹಣೆಗಾಗಿ ಎನ್‌ಸಿಎಗೆ ತೆರಳಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

Similar News