×
Ad

ಉಡುಪಿ: ಕೋಟ್ಪಾ ಕಾಯ್ದೆಯಡಿ ಪ್ರಕರಣ ದಾಖಲು

Update: 2022-12-20 20:01 IST

ಉಡುಪಿ: ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆಯನ್ನು ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಉಡುಪಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಸೋಮವಾರ ಪುತ್ತಿಗೆ ಹಾಗೂ ಪೆರ್ಡೂರು ವ್ಯಾಪ್ತಿಯ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ ಒಟ್ಟು 29 ಪ್ರಕರಣ ದಾಖಲಿಸಿ, 43,000 ರೂ. ದಂಡ ವಸೂಲಿ ಮಾಡಲಾಯಿತು.

ಈ ಸಂದರ್ಭದಲ್ಲಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ತಾಲೂಕು ಶಿಕ್ಷಣ ಇಲಾಖೆಯ ಗೋಪಾಲ ಶೆಟ್ಟಿ, ಕಾರ್ಮಿಕ ನಿರೀಕ್ಷಕ ಜಯೇಂದ್ರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿಯ ಶೈಲಾ ಶ್ಯಾಮನೂರು ಉಪಸ್ಥಿತರಿದ್ದರು.

Similar News