×
Ad

ನಂಜನಗೂಡು: ಯುವಕ ಆತ್ಮಹತ್ಯೆ

Update: 2022-12-20 20:28 IST

ಮೈಸೂರು,ಡಿ. 20: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಹುಣಸನಾಳು ಗ್ರಾಮದಲ್ಲಿ ನಡೆದಿದೆ.

ಮೃತ ಯುವಕನನ್ನು ಹುಣಸನಾಳು ಗ್ರಾಮದ ಮಹದೇವ ಶೆಟ್ಟಿ ಎಂಬುವರ ಪುತ್ರ ಮಹೇಂದ್ರ ಎಂದು ಗುರುತಿಸಲಾಗಿದೆ. 

ಪತ್ನಿಗೆ ಅನೈತಿಕ ಸಂಬಂಧ ಇರುವ ಬಗ್ಗೆ ಆರೋಪಿಸಿ ಪತಿ- ಪತ್ನಿ ನಡುವೆ ಗಲಾಟೆ ನಡೆದಿತ್ತೆನ್ನಲಾಗಿದ್ದು, ಈ ವಿಷಯ ತಿಳಿದ ಮಗ (ಮಹೇಂದ್ರ) ಮನ ನೊಂದು ಮನೆಯಲ್ಲಿ ರಾತ್ರಿ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ವಿಷಯ ತಿಳಿದು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗೆ ನಂಜನಗೂಡು ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Similar News