BMTC; ಟಿಕೇಟ್ ರಹಿತ ಪ್ರಯಾಣಿಕರಿಂದ 6 ಲಕ್ಷ ರೂ. ದಂಡ ವಸೂಲಿ

Update: 2022-12-21 18:41 GMT

ಬೆಂಗಳೂರು, ಡಿ.21: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟ್‍ನ್ನು ಪಡೆಯದೆ, ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ಸಂಸ್ಥೆ ನಗರದಾದ್ಯಂತ ಸಂಚರಿಸುವ ವಾಹನಗಳನ್ನು ತನಿಖಾ ತಂಡಗಳು ಪರಿಶೀಲನೆ ಮಾಡಿ, ಟಿಕೇಟ್ ರಹಿತ ಪ್ರಯಾಣಿಕರಿಂದ ಒಟ್ಟು ರೂ. 6,32,030, ದಂಡ ವಸೂಲಿ ಮಾಡಿದೆ. 

ತನಿಖಾ ತಂಡಗಳು ಒಟ್ಟು 15,530 ಟ್ರಿಪ್‍ಗಳನ್ನು ತಪಾಸಣೆ ಮಾಡಿದಾಗ 3326 ಟಿಕೇಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು ರೂ. 6,32,030, ದಂಡ ವಸೂಲಿ ಮಾಡಿ ನಿರ್ಲಕ್ಷ್ಯ ವಹಿಸಿದ ನಿರ್ವಾಹಕರ ವಿರುದ್ಧ 1486 ಪ್ರಕರಣಗಳನ್ನು ದಾಖಲಾಗಿವೆ, ಮತ್ತು ಮಹಿಳಾ ಪ್ರಯಾಣೀಕರಿಗೆ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 240 ಪುರುಷ ಪ್ರಯಾಣಿಕರಿಂದ 24,000 ರೂ. ದಂಡವನ್ನು ವಿಧಿಸಲಾಗಿದೆ ಎಂದು ಸಂಸ್ಥೆಯು ತಿಳಿಸಿದೆ.

ಪ್ರಯಾಣಿಕರು ಬಿಎಂಟಿಸಿ ಬಸ್‍ಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೇಟ್/ ದಿನದ ಪಾಸು, ಮಾಸಿಕ ಪಾಸುಗಳನ್ನು ಪಡೆದು ಪ್ರಯಾಣಿಸುವುದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದಾಗಿದೆ ಎಂದು ತಿಳಿಸಿದೆ.

Similar News