ಮಗಳ ಹುಟ್ಟುಹಬ್ಬ ಆಚರಣೆಗೆ ಸುವರ್ಣ ವಿಧಾನಸೌಧ ಬಾಡಿಗೆಗೆ ಕೊಡಿ: ಸ್ಪೀಕರ್​ಗೆ ಪತ್ರ ಬರೆದ ವಕೀಲ!

Update: 2022-12-22 06:19 GMT

ಬೆಳಗಾವಿ, ಡಿ: 22: ಸುವರ್ಣ ವಿಧಾನಸೌಧದಲ್ಲಿ ಸದ್ಯ ಕರ್ನಾಟಕ ವಿಧಾನ ಮಂಡಲ ಅಧಿವೇಶನ ನಡೆಯುತ್ತಿದ್ದು, ರಾಜ್ಯದ  ಜ್ವಲಂತ ಸಮಸ್ಯೆಗಳ ಬಗ್ಗೆ ಸದನದಲ್ಲಿ ಚರ್ಚೆಯಾಗುವ ನಿರೀಕ್ಷೆ ಇದೆ. ಈ ಮಧ್ಯೆ ವ್ಯಕ್ತಿಯೊಬ್ಬ ಮಗಳ ಹುಟ್ಟುಹಬ್ಬ ಆಚರಿಸಲು ಬೆಳಗಾವಿಯ ಸುವರ್ಣಸೌಧವನ್ನು ಬಾಡಿಗೆ ಕೊಡಿ ಎಂದು ಸಭಾಪತಿಗಳಿಗೆ ಮತ್ತು ಜಿಲ್ಲಾಧಿಕಾರಿಗೆ ಪತ್ರ ಬರೆದಿರುವ ಘಟನೆ ನಡೆದಿದೆ.

ಗೋಕಾಕ್​ ತಾಲೂಕಿನ ಘಟಪ್ರಭಾ ನಿವಾಸಿ ಹಾಗೂ ವಕೀಲ ಮಲ್ಲಿಕಾರ್ಜುನ ಚೌಕಾಶಿ ಎಂಬುವರೇ ಪತ್ರ ಬರೆದವರಾಗಿದ್ದು,  ಬೆಳಗಾವಿಯ ಸುವರ್ಣ ವಿಧಾನಸೌಧ ವರ್ಷದಲ್ಲಿ 15 ದಿನ ಕಲರವದಿಂದ ಕೂಡಿ ಉಳಿದ ದಿನ ಭೂತ ಬಂಗ್ಲೆಯಂತಿರುತ್ತದೆ. ಆದ್ದರಿಂದ ಶುಭ ಕಾರ್ಯಗಳಿಗೆ ಬಾಡಿಗೆ ಕೊಟ್ಟರೆ ಒಳ್ಳೆಯದು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪತ್ರದ್ಲಲೇನಿದೆ? 

ನನ್ನ ಏಕೈಕ ಪುತ್ರಿಯಾದ ಮಣಿಶ್ರೀಗೆ ಜನವರಿ 30ಕ್ಕೆ 5 ವರ್ಷ ಮುಗಿದು 6ನೇ ವರ್ಷ ತುಂಬಲಿದ್ದು, ಅವಳು 1ನೇ ತರಗತಿಯ ಪ್ರವೇಶ ಪಡೆಯಬೇಕಿದೆ. ಇದು ಅವಳ ಜೀವನದ ಅಮೂಲ್ಯ ಕ್ಷಣ. ಹೀಗಾಗಿ ಅವಳ ಹುಟ್ಟುಹಬ್ಬವನ್ನು ಆಚರಿಸುವುದರೊಂದಿಗೆ ನಮ್ಮ ಭಾಗದಲ್ಲಿ ಚಿಕ್ಕ ಹೆಣ್ಣುಮಕ್ಕಳಿಗೆ ಹುಟ್ಟದಟ್ಟಿ ಮಾಡುವ ಪದ್ಧತಿಯಿದ್ದು, ಇದು ಕೂಡ ಜೀವನದಲ್ಲಿ ಒಮ್ಮೆ ಬರುವಂತಹದ್ದು. ಆದ್ದರಿಂದ ವರ್ಷದಲ್ಲಿ 15 ದಿನ ಕಲರವದಿಂದ ಕೂಡಿ ಉಳಿದ ದಿನ ಭೂತ ಬಂಗ್ಲೆಯಂತಿರುವ ಕರ್ನಾಟಕ ಸುವರ್ಣ ವಿಧಾನಸೌಧ ಸಭಾಂಗಣವನ್ನು ಬಾಡಿಗೆ ನೀಡಬೇಕು ಎಂದು ವಿನಂತಿಸಿದ್ದಾರೆ.

ಇದನ್ನೂ ಓದಿ: ಅಡಿಕೆ ಬೆಳೆ ಭವಿಷ್ಯ ಇನ್ನಷ್ಟು ಪಾತಾಳಕ್ಕೆ: ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ 

Similar News