ಕೋವಿಡ್ ನೆಪದಲ್ಲಿ ಅವಧಿಗೂ ಮುನ್ನ ಚುನಾವಣೆ ನಡೆಸಲು ಬಿಜೆಪಿಯಿಂದ ಸಿದ್ಧತೆ: ಡಿ.ಕೆ. ಶಿವಕುಮಾರ್ ಆರೋಪ
ಬೆಳಗಾವಿ, ಡಿ.22: 'ಬಿಜೆಪಿಯವರು ಕೊರೋನ ನೆಪದಲ್ಲಿ ಚುನಾವಣೆ ನಡೆಸುವ ಸಿದ್ಧತೆ ಮಾಡಿಕೊಂಡಿದ್ದಾರೆ. ಹಾಗಾಗಿ ಕೊರೋನ ಆತಂಕ ಹುಟ್ಟಿಸುತ್ತಿದ್ದಾರೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪ ಮಾಡಿದ್ದಾರೆ.
ಸುವರ್ಣ ಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, 'ಕೋವಿಡ್ ಇದೆ ರಂದು ರಾಹುಲ್ ಗಾಂಧಿ ಅವರ ಜೋಡೊ ಯಾತ್ರೆ ನಿಲ್ಲಿಸಲು ಹೇಳಿದ್ದಾರೆ. ಮೇಕೆದಾಟು ಸಮಯದಲ್ಲೂ ನಮಗೆ ಇದೇ ರೀತಿ ಆಗಿತ್ತು. ಆಗ ಪ್ರಕರಣ ಕೂಡ ದಾಖಲಿಸಿದ್ದರು. ಇದೀಗ ರಾಹುಲ್ ಗಾಂಧಿಗೆ ಜನರಿದ ವ್ಯಕ್ತವಾಗುತ್ತಿರುವ ಪ್ರೀತಿಗೆ ಹೀಗೆಲ್ಲ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
'ಕೋವಿಡ್ ನೆಪದಲ್ಲಿ ಚುನಾವಣೆ ಮಾಡಿ ಅಂತ ಹೇಳಲಾಗಿದೆಯಂತೆ. ಈ ಬಗ್ಗೆ ಸಿದ್ಧತೆ ಮಾಡಿಕೊಳ್ಳಲು ಹೇಳಿದ್ದಾರಂತೆ. ಡಿಜೆ ಜೊತೆ ಮಾತನಾಡಿದ್ದಾರೆ ಅನ್ನೋ ಊಹಾಪೋಹದ ಸುದ್ದಿಯೂ ಕೇಳಿ ಬರುತ್ತಿದೆ' ಎಂದರು.
ಅವಧಿಗೂ ಮುನ್ನ ಚುನಾವಣೆ ಮಾಡುವ ಯಾವುದೇ ಪ್ರಸ್ತಾವನೆ ನಮ್ಮ ಮುಂದಿಲ್ಲ: ಸಿಎಂ ಬೊಮ್ಮಾಯಿ
''ಕೋವಿಡ್ ನಿಂದಾಗಿ ಅವಧಿ ಮುನ್ನವೇ ಚುನಾವಣೆ ನಡೆಯಲಿದೆ ಹಾಗೂ ದಿಲ್ಲಿಯ ನಾಯಕರು ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಂದು ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದಾರೆ. ದಿಲ್ಲಿಯ ನಾಯಕರು ಈ ವಿಚಾರವಾಗಿ ಮಾತನಾಡಿಲ್ಲ. ಅವಧಿಗೂ ಮುನ್ನವೇ ಚುನಾವಣೆ ಮಾಡುವ ಯಾವುದೇ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ಸ್ಪಷ್ಟೀಕರಿಸುತ್ತೇನೆ '' ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.