×
Ad

ಚಿತ್ರದುರ್ಗ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್‌ಗೆ ಹೈಕೋರ್ಟ್ ನಿಂದ ಜಾಮೀನು

ಮುರುಘಾಶ್ರೀ ವಿರುದ್ಧ ಪಿತೂರಿ ನಡೆಸಿದ ಆರೋಪ

Update: 2022-12-22 21:15 IST

ಬೆಂಗಳೂರು, ಡಿ.22: ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಸ್ವಾಮಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸುವಂತೆ ಪ್ರಚೋದಿಸಿದ ಆರೋಪದಲ್ಲಿ ಬಂಧಿತರಾಗಿದ್ದ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 

ಮುರುಘಾಶ್ರೀ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ ಎಂದು ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಅವರು, ಎಸ್.ಕೆ.ಬಸವರಾಜನ್ ವಿರುದ್ಧ ದೂರು ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವರಾಜನ್‌ಗೆ ಚಿತ್ರದುರ್ಗದ ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಅವರು ಹೈಕೋರ್ಟ್ ಜಾಮೀನು ಅರ್ಜಿ ಸಲ್ಲಿಸಿದ್ದರು. 

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ರಾಚಯ್ಯ ಅವರಿದ್ದ ಏಕಸದಸ್ಯ ನ್ಯಾಯಪೀಠ, ಆರೋಪಿ ಬಸವರಾಜನ್‌ಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ.

Similar News