×
Ad

ಇನ್ನೂ ಒಂದು ವರ್ಷ ಉಚಿತ ಆಹಾರ ಧಾನ್ಯಗಳ ವಿತರಣೆ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Update: 2022-12-23 21:13 IST

ಹೊಸದಿಲ್ಲಿ: ಡಿಸೆಂಬರ್ 2023 ರವರೆಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಅಡಿಯಲ್ಲಿ ಉಚಿತ ಆಹಾರ ಧಾನ್ಯಗಳ ವಿತರಣೆಯನ್ನು ಮುಂದುವರಿಸುವುದಾಗಿ ಭಾರತ ಸರ್ಕಾರ ಶುಕ್ರವಾರ ತಿಳಿಸಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 81.3 ಕೋಟಿ ಬಡವರಿಗೆ ಒಂದು ವರ್ಷ ಉಚಿತವಾಗಿ ಪಡಿತರ ವಿತರಣೆ ಮಾಡುವ ಯೋಜನೆ ಮುಂದುವರಿಸಲು ಕೇಂದ್ರ ನಿರ್ಧರಿಸಿದೆ.

ಇನ್ನೂ ಒಂದು ವರ್ಷಕ್ಕೆ ಉಚಿತ ಆಹಾರಧಾನ್ಯ ವಿತರಣೆಗೆ ಶುಕ್ರವಾರ ಸಂಪುಟ ಸಭೆ ಅನುಮೋದನೆ ನೀಡಿದ್ದು, 2 ಲಕ್ಷ ಕೋಟಿ ವೆಚ್ಚವನ್ನು ಕೇಂದ್ರ ಭರಿಸಲಿದೆ ಎಂದು ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರವನ್ನು ಉಚಿತವಾಗಿ ವಿತರಿಸಲು ಸುಮಾರು ₹2 ಲಕ್ಷ ಕೋಟಿ ವೆಚ್ಚವಾಗಲಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.

NFSA ಅಡಿಯಲ್ಲಿ, ಸರ್ಕಾರವು ಪ್ರಸ್ತುತ ಪ್ರತಿ ವ್ಯಕ್ತಿಗೆ 5 ಕಿಲೋಗ್ರಾಂಗಳಷ್ಟು ಆಹಾರ ಧಾನ್ಯಗಳನ್ನು ಪ್ರತಿ ಕೆಜಿಗೆ ₹ 2-3 ರಂತೆ ಒದಗಿಸುತ್ತದೆ. ಅಂತ್ಯೋದಯ ಅನ್ನ ಯೋಜನೆ (ಎಎವೈ) ಅಡಿಯಲ್ಲಿ ಬರುವ ಕುಟುಂಬಗಳು ತಿಂಗಳಿಗೆ 35 ಕೆಜಿ ಆಹಾರ ಧಾನ್ಯಗಳನ್ನು ವಿತರಿಸುತ್ತಿದೆ.

Similar News