×
Ad

ಕಮಲಾಕ್ಷಿ ಸೊಸೈಟಿ ವಂಚನೆ ಪ್ರಕರಣ: ಪೊಲೀಸರಿಂದ ದಾಖಲೆ ಪರಿಶೀಲನೆ

Update: 2022-12-23 23:07 IST

ಉಡುಪಿ: ಇಲ್ಲಿನ ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘದ ಕೋಟ್ಯಾಂತರ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ‌ ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಇಂದು ಉಡುಪಿ ಕಚೇರಿಯ ಬೀಗ ತೆರೆದು ದಾಖಲಾತಿಗಳನ್ನು ಪರಿಶೀಲನೆ ನಡೆಸಿದರು. 

ಠೇವಣಿದಾರರೊಬ್ಬರು ಉಡುಪಿ‌ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಸೊಸೈಟಿ ಅಧ್ಯಕ್ಷ ಬಿ ವಿ ಲಕ್ಷ್ಮೀನಾರಾಯಣ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದರು. ಅದರಂತೆ ಇಂದು ಪೊಲೀಸರು ಕಚೇರಿಯ‌ ಬೀಗ ತೆರೆದು‌ ಪರಿಶೀಲನೆ ನಡೆಸಿದರು.

ಇದೀಗ ಒಂದೊಂದೆ ಠೇವಣಿದಾರರು ಲಕ್ಷ್ಮೀನಾರಾಯಣ ವಿರುದ್ಧ ದೂರು ನೀಡಲು ಮುಂದಾಗುತ್ತಿದ್ದು, ಒಟ್ಟು 70 ಲಕ್ಷ ರೂ.ಗೂ ಅಧಿಕ ಮೊತ್ತವನ್ನು ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇನ್ನೂ ಹಲವು ದೂರುಗಳು ದಾಖಲಾಗುವ ಸಾಧ್ಯತೆ ಇದ್ದು, ಆ ಬಳಿಕವೇ ಒಟ್ಟು ಎಷ್ಟು ಮೊತ್ತದ ವಂಚನೆ‌ ಆಗಿದೆ ಎಂಬುವುದು ಖಚಿತವಾಗಿ ತಿಳಿದು ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಸೊಸೈಟಿ ಅಧ್ಯಕ್ಷ ಬಿ.ವಿ ಲಕ್ಷ್ಮೀನಾರಾಯಣ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಪೊಲೀಸರು ಬಲೆಬೀಸಿದ್ದಾರೆ.

Similar News