ಬೆಂಗಳೂರು | ಡ್ರಗ್ ಪೆಡ್ಲರ್ ಬಂಧನ; 25 ಲಕ್ಷ ಮೌಲ್ಯದ ಎಂಡಿಎಂಎ ಜಪ್ತಿ

Update: 2022-12-23 17:41 GMT

ಬೆಂಗಳೂರು, ಡಿ.23: ಡ್ರಗ್ ಪೆಡ್ಲರ್ ನೊಬ್ಬನನ್ನು ಬಂಧಿಸಿ, 25 ಲಕ್ಷ ರೂ.ಮೌಲ್ಯದ ಮಾದಕವಸ್ತುಗಳನ್ನು ಜಪ್ತಿ ಮಾಡಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ನಡೆದಿದೆ.

ಬಂಧಿತನನ್ನು ನೈಜೇರಿಯಾದ ಅಗ್ಬು ಚಿಕ್ಕೆ ಅಂಟೋನಿ ಎಂದು ಗುರುತಿಸಲಾಗಿದೆ. ಪೆಡ್ಲರ್‍ನಿಂದ 25 ಲಕ್ಷ ಮೌಲ್ಯದ ನಿಷೇಧಿತ ಮಾದಕ ಮತ್ತು 250 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟಲ್, ಮೊಬೈಲ್, 700 ರೂ.ಗಳನ್ನು ಜಪ್ತಿ ಮಾಡಲಾಗಿದೆ.

ಆರೋಪಿಯು 4 ವರ್ಷಗಳ ಹಿಂದೆ ಬ್ಯುಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದಿದ್ದು ಕಡಿಮೆ ಸಮಯದಲ್ಲಿ ಹೆಚ್ಚಿನ ಹಣ ಗಳಿಸುವ ದುರುದ್ದೇಶದಿಂದ ಗೋವಾದಲ್ಲಿ ನೆಲೆಸಿರುವ ಆಫ್ರಿಕಾ ಮೂಲದ ಪರಿಚಯಸ್ಥ ವ್ಯಕ್ತಿಗಳಿಂದ ಕಡಿಮೆ ಬೆಲೆಗೆ ಮಾದಕ ವಸ್ತು ಎಂಡಿಎಂಎ ಕ್ರಿಸ್ಟಲ್ ಅನ್ನು ಖರೀದಿಸಿ, ಎಲೆಕ್ಟ್ರಾನಿಕ್ ಸಿಟಿ ಸುತ್ತಮುತ್ತಲ ಕಾಲೇಜು ವಿದ್ಯಾರ್ಥಿಗಳಿಗೆ, ಐಟಿ/ಬಿಟಿ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿರುವುದು ಪ್ರಾಥಮಿಕ ವಿಚಾರಣೆಯಿಂದ ತಿಳಿದು ಬಂದಿದೆ.

ಈ ಮೊಕದ್ದಮೆ ದಾಖಲಿಸಿಕೊಂಡಿರುವ ಎಲೆಕ್ಟ್ರಾನಿಕ್ ಸಿಟಿ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Similar News