ಕೋವಿಡ್ ಭೀತಿಯ ನಡುವೆ ದಿಲ್ಲಿ ಪ್ರವೇಶಿಸಿದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ

Update: 2022-12-24 05:01 GMT

ಹೊಸದಿಲ್ಲಿ: ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸುವಂತೆ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಪತ್ರ ಬರೆದಿರುವ ನಡುವೆ ಪಕ್ಷದ ಸಂಸದ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ್ ಜೋಡೊ ಯಾತ್ರೆ  ಶನಿವಾರ ಮುಂಜಾನೆ ದಿಲ್ಲಿಯನ್ನು ಪ್ರವೇಶಿಸಿತು.

ದಿಲ್ಲಿ ಕಾಂಗ್ರೆಸ್ ಮುಖ್ಯಸ್ಥ ಅನಿಲ್ ಚೌಧರಿ ಹಾಗೂ  ಪಕ್ಷದ ಕಾರ್ಯಕರ್ತರು ರಾಹುಲ್ ಗಾಂಧಿ, ಪಕ್ಷದ ಇತರ ನಾಯಕರು ಮತ್ತು ಯಾತ್ರಿಗಳು ಫರಿದಾಬಾದ್‌ನಿಂದ ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸುತ್ತಿದ್ದಂತೆ ಬದರ್‌ಪುರ ಗಡಿಯಲ್ಲಿ ಸ್ವಾಗತಿಸಿದರು.

ರಾಹುಲ್ ಗಾಂಧಿಯವರೊಂದಿಗೆ ಪವನ್ ಖೇರಾ, ಭೂಪಿಂದರ್ ಸಿಂಗ್ ಹೂಡಾ, ಕುಮಾರಿ ಸೆಲ್ಜಾ ಮತ್ತು ರಣದೀಪ್ ಸುರ್ಜೆವಾಲಾ ಸೇರಿದಂತೆ ಹಲವು ಪಕ್ಷದ ನಾಯಕರು ಇದ್ದರು.

ಪಕ್ಷದ ಕಾರ್ಯಕರ್ತರು ಹಾಗೂ  ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ , 'ನಫ್ರತ್ ಕಾ ಬಜಾರ್' (ದ್ವೇಷದ ಮಾರುಕಟ್ಟೆ) ಮಧ್ಯೆ 'ಮೊಹಬ್ಬತ್ ಕಿ ದುಕಾನ್' (ಪ್ರೀತಿಯ ಅಂಗಡಿ) ತೆರೆಯುವುದು ತಮ್ಮ ಯಾತ್ರೆಯ ಉದ್ದೇಶವಾಗಿದೆ ಎಂದು ಪುನರುಚ್ಚರಿಸಿದರು.

"ದೇಶದ ಜನಸಾಮಾನ್ಯರು ಈಗ ಪ್ರೀತಿಯ ಬಗ್ಗೆ ಮಾತನಾಡುತ್ತಿದ್ದಾರೆ. ಪ್ರತಿ ರಾಜ್ಯದಲ್ಲೂ ಲಕ್ಷಾಂತರ ಜನರು ಯಾತ್ರೆಗೆ ಸೇರಿದ್ದಾರೆ. ನಿಮ್ಮ ದ್ವೇಷದ 'ಬಜಾರ್'ನಲ್ಲಿ ಪ್ರೀತಿಯ ಅಂಗಡಿ ತೆರೆಯಲು ನಾವು ಇಲ್ಲಿದ್ದೇವೆ ಎಂದು ನಾನು ಆರೆಸ್ಸೆಸ್ ಹಾಗೂ ಬಿಜೆಪಿಯವರಿಗೆ ಹೇಳಿದ್ದೇನೆ" ಎಂದು ರಾಹುಲ್ ಗಾಂಧಿ ಹೇಳಿದರು.

Similar News