ಸಾರ್ವಕರ್ ಟೀಕಿಸಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ದೂರು

Update: 2022-12-24 09:07 GMT

ಲಕ್ನೊ: ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ವಿನಾಯಕ್ ದಾಮೋದರ್ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಲಕ್ನೊದ ನ್ಯಾಯಾಲಯವೊಂದರಲ್ಲಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ.

ದೂರಿನ ಕುರಿತು ವಿಚಾರಣೆ ನಡೆಸಿದ ಹೆಚ್ಚುವರಿ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಎ.ಕೆ. ಶ್ರೀವಾಸ್ತವ, ಭಾರತೀಯ ಅಪರಾಧ ದಂಡ ಸಂಹಿತೆಯ ಸೆಕ್ಷನ್ 200ರ ಅಡಿ ಸಾಕ್ಷ್ಯಾಧಾರಗಳನ್ನು ಒದಗಿಸಿ. ಒಮ್ಮೆ ಅರ್ಜಿದಾರರು ಹಾಗೂ ಅವರ ಸಾಕ್ಷ್ಯಾಧಾರಗಳನ್ನು ಪರೀಕ್ಷಿಸಿದ ನಂತರ ರಾಹುಲ್ ಗಾಂಧಿಯ ವಿರುದ್ಧದ ಆರೋಪವನ್ನು ಆಧರಿಸಿ ಸಮನ್ಸ್ ನೀಡಬೇಕೊ, ಬೇಡವೊ ಎಂಬುದನ್ನು ನ್ಯಾಯಾಲಯ ನಿರ್ಧರಿಸಲಿದೆ" ಎಂದು ದೂರುದಾರ ನೃಪೇಂದ್ರ ಪಾಂಡೆಗೆ ತಿಳಿಸಿದರು.

ಮುಂದಿನ ವಿಚಾರಣೆಯನ್ನು ಜನವರಿ 9ಕ್ಕೆ ನಿಗದಿಪಡಿಸಲಾಗಿದೆ ಎಂದು The Hindu ವರದಿ ಮಾಡಿದೆ.

ಇದಕ್ಕೂ ಮುನ್ನ ದೂರುದಾರ ನೃಪೇಂದ್ರ ಪಾಂಡೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 156(3)ರ ಅಡಿ ಮೊಕದ್ದಮೆ ದಾಖಲಿಸಿ, ರಾಹುಲ್ ಗಾಂಧಿ ವಿರುದ್ಧ ಪ್ರಾಥಮಿಕ ಮಾಹಿತಿ ವರದಿ ದಾಖಲಿಸಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ, ಮೊಕದ್ದಮೆಯನ್ನು ದಾಖಲಿಸಿಕೊಳ್ಳಲು ನಿರಾಕರಿಸಿರುವ ನ್ಯಾಯಾಲಯವು ಕೇವಲ ದೂರು ಎಂದು ದಾಖಲಿಸಿಕೊಂಡಿದೆ.

Similar News