ಸಚಿವ ಸ್ಥಾನ ಅಲ್ಲ, ನನಗೆ ಬಿಜೆಪಿ ಪಕ್ಷ ಸಂಘಟನೆ ಮುಖ್ಯ: ರಮೇಶ್ ಜಾರಕಿಹೊಳಿ

Update: 2022-12-24 13:40 GMT

ಬೆಳಗಾವಿ, ಡಿ.24: ಸಚಿವ ಸ್ಥಾನ ಸಿಗುವುದು, ಬಿಡುವುದು ಬೇರೆ ವಿಚಾರ.ಆದರೆ, ನನಗೆ ಪಕ್ಷ ಸಂಘಟನೆ ಮುಖ್ಯ.ಜಿಲ್ಲೆಯ 18 ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಶಕ್ತಿ ಮೀರಿ ಪ್ರಯತ್ನ ಮಾಡುತ್ತೇನೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಶನಿವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿಶೇಷವಾಗಿ ಬೆಳಗಾವಿ ಗ್ರಾಮೀಣ ಭಾಗಕ್ಕೆ ಹೆಚ್ಚು ಒತ್ತು ನೀಡಲಾಗುತ್ತದೆ. ಇಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಶಕ್ತಿ ಮೀರಿ ಪ್ರಯತ್ನ ಮಾಡುತ್ತೇನೆ ಎಂದರು.

ಜನಸಾಮಾನ್ಯರ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು, ಹಣದಿಂದ ಚುನಾವಣೆ ಗೆಲ್ಲುತ್ತೇನೆ ಎಂದರೆ ಆಗುವುದಿಲ್ಲ ಎಂದ ಅವರು, ಕಳೆದ ಬಾರಿ ಬಿಜೆಪಿ ಅಭ್ಯರ್ಥಿ ಸಂಜಯ ಪಾಟೀಲ ಸೋತಿದ್ದರು. ಈ ಬಾರಿ ಚುನಾವಣೆಯಲ್ಲಿ ನನ್ನ ಶಕ್ತಿ ತೋರಿಸುತ್ತೇನೆ. ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ ಎಂದು ಅವರು ಹೇಳಿದರು.

Similar News