ಶಿರ್ವ: ಕಾರು-ಟೆಂಪೋ ಢಿಕ್ಕಿ; ಇಬ್ಬರು ಮೃತ್ಯು
Update: 2022-12-24 23:54 IST
ಶಿರ್ವ: ಕಾರು ಮತ್ತು ಟೆಂಪೋ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಶನಿವಾರ ಪಂಜಿಮಾರು ಪಾಲಮೆ ಬಳಿ ನಡೆದಿದೆ. ಘಟನೆಯಲ್ಲಿ ಮಹಿಳೆ ಹಾಗೂ ಯುವಕನೋರ್ವ ಮೃತಪಟ್ಟಿದ್ದಾರೆ.
ಕಟಪಾಡಿಯಿಂದ ಶಿರ್ವ ಕಡೆಗೆ ತೆರಳುತ್ತಿದ್ದ ಕಾರಿಗೆ ಟೆಂಪೋ ಮುಖಾಮುಖಿಯಾಗಿ ಢಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಅಪಘಾತಕ್ಕೊಳಗಾದ ಕಾರು ಬೆಂಗಳೂರು ಮೂಲದ್ದು ಎನ್ನಲಾಗಿದ್ದು, ಮೃತರ ಗುರುತು ಪತ್ತೆಯಾಗಿಲ್ಲ.
ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳೊಂದಿಗೆ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.