×
Ad

ಉಡುಪಿ ಎನ್‌ಆರ್‌ಎಲ್‌ಎಂ ಸಂಜೀವಿನಿಗೆ 2 ರಾಜ್ಯ ಪ್ರಶಸ್ತಿ

Update: 2022-12-25 21:42 IST

ಉಡುಪಿ: ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಉತ್ತಮ ಆಡಳಿತ ದಿನಾಚರಣೆಯ ಅಂಗವಾಗಿ ರವಿವಾರ ಕರ್ನಾಟಕ ಸರಕಾರದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದ ವಿವಿಧ ಕ್ಷೇತ್ರಗಳ ಪ್ರಶಸ್ತಿ ಪುರಸ್ಕಾರದಲ್ಲಿ ಉಡುಪಿ ಜಿಲ್ಲೆಯ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್‌ಆರ್‌ಎಲ್‌ಎಂ) ಸಂಜೀವಿನಿಗೆ ಎರಡು ಪ್ರಶಸ್ತಿಗಳು ದೊರಕಿವೆ.

ಸಾಮಾಜಿಕ ಕ್ರೋಢೀಕರಣ (ಅರ್ಹ ಕುಟುಂಬಗಳನ್ನು ಸಂಜೀವಿನಿ ಯೋಜನೆಯಡಿ ತರುವಲ್ಲಿ) ಹಾಗೂ ಆಧಾರ್ ಜೋಡಣೆಯಲ್ಲಿ ಉತ್ತಮ ಸಾಧನೆ ಮಾಡಿರುವ ಜಿಲ್ಲೆ ಎನಿಸಿ ರಾಜ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದೆ. ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಈ ಪ್ರಶಸ್ತಿಗಳನ್ನು  ಪ್ರದಾನ ಮಾಡಿದರು.

ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ, ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಚಿವ ಡಾ.ಅಶ್ವಥ್‌ನಾರಾಯಣ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಜೀವನೋ ಪಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್, ಡೇ-ಎನ್‌ಎಲ್‌ಎಂ ಅಭಿಯಾನದ ನಿರ್ದೇಶಕರಾದ ಡಾ.ರಾಗಪ್ರಿಯಾ ಮತ್ತಿತರರು ಉಪಸ್ಥಿತರಿದ್ದರು.

Similar News