ಹಿಮಾಚಲ ಪ್ರದೇಶ: ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಸಿಎಂ ಠಾಕೂರ್ ಆಯ್ಕೆ

Update: 2022-12-25 17:13 GMT

ಶಿಮ್ಲಾ, ಡಿ. 25: ಮಾಜಿ ಮುಖ್ಯಮಂತ್ರಿ ಹಾಗೂ ಆರು ಬಾರಿಯ ಶಾಸಕ ಜೈರಾಮ ಠಾಕೂರ್ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಹಿರಿಯ ನಾಯಕರೋರ್ವರು ತಿಳಿಸಿದರು.

ನವಂಬರ್ನಲ್ಲಿ ನಡೆದ ಚುನಾವಣೆಯಲ್ಲಿ 68 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ 40 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿಯನ್ನು ಪದಚ್ಯುತಗೊಳಿಸಿತ್ತು. 25 ಸ್ಥಾನಗಳನ್ನು ಪಡೆದಿರುವ ಬಿಜೆಪಿ ಪ್ರತಿಪಕ್ಷ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ. ಇತರ ಮೂರು ಸ್ಥಾನಗಳು ಪಕ್ಷೇತರರ ಪಾಲಾಗಿವೆ.

ರವಿವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲ 24 ಶಾಸಕರು ಠಾಕೂರ್ ಹೆಸರನ್ನು ಸೂಚಿಸಿದ್ದು,ಅವರು ಸರ್ವಾನುಮತದಿಂದ ನಾಯಕನಾಗಿ ಆಯ್ಕೆಯಾಗಿದ್ದಾರೆ ಎಂದು ಪಕ್ಷದ ಹಿರಿಯ ನಾಯಕ ಹಾಗೂ ಚುನಾವಣೆ ನಿರ್ವಹಣೆ ಸಮಿತಿಯ ಅಧ್ಯಕ್ಷ ಮಂಗಲ ಪಾಂಡೆ ತಿಳಿಸಿದರು. ಇತ್ತೀಚಿನ ಚುನಾವಣೆಯಲ್ಲಿ ಠಾಕೂರ್ ಸೆರಾಜ್ ವಿಧಾನಸಭಾ ಕ್ಷೇತ್ರದಿಂದ ಅತ್ಯಂತ ಹೆಚ್ಚು ಮತಗಳ ಅಂತರದಿಂದ ಆಯ್ಕೆಯಾಗಿದ್ದಾರೆ.

Similar News