ಚಾಮರಾಜನಗರ: ಕಲ್ಲು ಕ್ವಾರಿ ಕುಸಿದು ಮೂವರು ಮೃತ್ಯು

Update: 2022-12-26 11:49 GMT

ಚಾಮರಾಜನಗರ: ಕಲ್ಲು ಕ್ವಾರಿ ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಬಿಸಲ್ವಾಡಿಯ ಬಿಳಿ ನಡೆದಿದೆ. 

ಕುಮಾರ್ (28), ಶಿವರಾಜು (35) ಹಾಗೂ ಸಿದ್ದರಾಜು (27) ಮೃತಪಟ್ಟವರು ಎಂದು ತಿಳಿದು ಬಂದಿದೆ. 

ಕಾರ್ಮಿಕರೊಬ್ಬರು ಕ್ವಾರಿಯ ಗೋಡೆಯ ಮಧ್ಯದಲ್ಲಿ ಕಲ್ಲು ಸ್ಪೋಟಿಸಲು ಕುಳಿ ಹೊಡೆಯುತ್ತಿದ್ದರು. ಇನ್ನಿಬ್ಬರು ಕೆಳಗಡೆ ನಿಂತು ಅವರಿಗೆ ನೆರವಾಗುತ್ತಿದ್ದರು. ಈ ಸಂದರ್ಭದಲ್ಲಿ ಗುಡ್ಡ ಕುಸಿದಿದೆ ಎನ್ನಲಾಗಿದೆ. 

ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೊಬ್ಬರು ತೀವ್ರವಾಗಿ ಗಾಯಗೊಂಡರು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಅಷ್ಟರಲ್ಲಾಗಲೇ ಮೃತಪಟ್ಟರು.

ಘಟನಾ ಸ್ಥಳಕ್ಕೆ ಡಿವೈಎಸ್ ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ತಹಶೀಲ್ದಾರ್ ಬಸವರಾಜು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಮಡಹಳ್ಳಿಯ ಗುಮ್ಮಕಲ್ಲುಗುಡ್ಡದ ಕಲ್ಲು ಕ್ವಾರಿಯಲ್ಲಿ ಕಳೆದ ಮಾರ್ಚ್ 4ರಂದು ಬಂಡೆ ಕುಸಿದು ಬಿಹಾರ ಮೂಲದ ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಈ ಘಟನೆ ಮಾಸುವ ಮುನ್ನವೇ ಚಾಮರಾಜನಗರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ.

Similar News