ಕೊಡಗು ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲ: ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ

Update: 2022-12-26 16:11 GMT

ಬೆಳಗಾವಿ(ಸುವರ್ಣ ವಿಧಾನಸೌಧ), ಡಿ.26: ಕೊಡಗು ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವ ಯಾವುದೇ ಪ್ರಸ್ತಾವನೆ ರಾಜ್ಯ ಸರಕಾರದ ಮುಂದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು.

ಸೋಮವಾರ ಪರಿಷತ್ತಿನ ಪ್ರಶ್ನೋತ್ತರಕಲಾಪದಲ್ಲಿ ಸದಸ್ಯ ಕುಶಾಲಪ್ಪ ಎಂ.ಪಿ.ಪ್ರ್ರಶ್ನೆಗೆ ಉತ್ತರಿಸಿದ ಅವರು, ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಅಗತ್ಯತೆ ಮತ್ತು ಪ್ರಸ್ತಾವನೆಇಲ್ಲ. ಬದಲಿಗೆ 750 ಹಾಸಿಗೆಗಳ ಸಾಮರ್ಥ್ಯದ ಸ್ಪೆಷಾಲಿಟಿ ಆಸ್ಪತ್ರೆಯನ್ನು ಅಲ್ಲಿ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.

ಈಗಾಗಲೇ ರಾಜ್ಯದಲ್ಲಿ 10 ಸೂಪರ್ ಸ್ಪೆಷಾಲಿಟಿ  ಆಸ್ಪತ್ರೆಗಳಿವೆ. ಜಿಲ್ಲೆಗೊಂದು ಈ ಮಾದರಿಯ ಆಸ್ಪತೆಗಳನ್ನು ನಿರ್ಮಿಸುವುದು ಸರಕಾರ ಗುರಿ ಇದೆ.ಆದರೆ, ಅನುದಾನದ ಲಭ್ಯತೆ ಮತ್ತು ಆಯಾ ಜಿಲ್ಲೆಗಳಲ್ಲಿನ ರೋಗಿಗಳ ಪ್ರಮಾಣ ಮತ್ತಿತರ ಅಂಶಗಳನ್ನು ಆಧರಿಸಿ ನಿರ್ಮಿಸಲಾಗುವುದು ಎಂದರು.

Similar News