ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಡಿ.29ರಂದು ನೇರ ಸಂದರ್ಶನ

Update: 2022-12-26 16:49 GMT

ಉಡುಪಿ: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಡಿ.29ರಂದು ಬೆಳಗ್ಗೆ 10:30ಕ್ಕೆ ಬಿ.ಎಸ್.ಎಲ್ ಇಂಡಿಯಾ ಪ್ರೈ ಲಿ.ನ 2ನೇ ಮಹಡಿ, ನಂದ ಕರ್ಮಷಿಯಲ್ ಕಾಂಪ್ಲೆಕ್ಸ್, ಕೋರ್ಟ್ ರೋಡ್, ಉಡುಪಿ ಇಲ್ಲಿ ನೇರ ಸಂದರ್ಶನ ನಡೆಯಲಿದೆ.
ಎಸೆಸೆಲ್ಸಿ, ಪಿಯುಸಿ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.  
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 8197440155 ಹಾಗೂ 9901472710ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Similar News