ವಿಧಾನಸಭಾ ಚುನಾವಣೆ: ದ.ಕ.ಜಿಲ್ಲಾ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ

Update: 2022-12-26 17:17 GMT

ಮಂಗಳೂರು: ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆಗೊಳಿಸುವ ನಿಟ್ಟಿನಲ್ಲಿ ಕೆಪಿಸಿಸಿಯಿಂದ ನಿಯೋಜಿತರಾಗಿರುವ ದ.ಕ.ಜಿಲ್ಲಾ ಕಾಂಗ್ರೆಸ್ ಚುನಾವಣಾ ಸಮಿತಿಯ ಅಧ್ಯಕ್ಷ ಸಲೀಂ ಅಹ್ಮದ್‌ರ ಅಧ್ಯಕ್ಷತೆಯಲ್ಲಿ ಸೋಮವಾರ ನಗರದ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ನಡೆಯಿತು.

ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ47 ಮಂದಿ ಆಕಾಂಕ್ಷಿಗಳನ್ನು ಪ್ರತ್ಯೇಕವಾಗಿ ಮಾತನಾಡಿಸಿ ಅಭಿಪ್ರಾಯ ಸಂಗ್ರಹಿಸಲಾಯಿತು. ಬಳಿಕ ಆಯಾ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರು, ಕೆಪಿಸಿಸಿ ಸದಸ್ಯರು ಹಾಗೂ ಜಿಲ್ಲಾ ಪ್ರಮುಖ ನಾಯಕರುಗಳೊಂದಿಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಲಾಯಿತು.

ಈ ಸಂದರ್ಭ ಚುನಾವಣಾ ಸಮಿತಿಯ ಸದಸ್ಯ ರೆಹಮಾನ್ ಖಾನ್, ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಉಪಸ್ಥಿತರಿದ್ದರು.

Similar News