ಕೋವಿಡ್ | ಜನಸಾಮಾನ್ಯರ ಆರ್ಥಿಕತೆಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮ: ಸಿಎಂ ಬೊಮ್ಮಾಯಿ

Update: 2022-12-26 18:26 GMT

ಬೆಳಗಾವಿ, (ಸುವರ್ಣ ವಿಧಾನಸೌಧ) ಡಿ. 26: ‘ಕೋವಿಡ್ ಸೋಂಕಿನಿಂದ ಜನರ ಆರ್ಥಿಕತೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಹಂತಹಂತವಾಗಿ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸೋಮವಾರ ಇಲ್ಲಿನ ಸುವರ್ಣಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸಚಿವಸಂಪುಟದಲ್ಲಿ ಈ ಬರ್ಗೆ ಚರ್ಚಿಸಲಾಗಿದ್ದು, ಜನರಲ್ಲಿ  ಜಾಗೃತಿ ಮೂಡಿಸುವುದು, ಬೂಸ್ಟರ್ ಡೋಸ್ ಹೆಚ್ಚಿಸುವುದು,ಐಎ¯ಐ ಮತ್ತು ಸಾರಿ ಪರೀಕ್ಷೆಗಳನ್ನು ಹೆಚ್ಚಿಸುವುದು, ಮಾಸ್ಕ್‍ಗಳ ಧಾರಣೆ, ಒಳಾಂಗಣಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯಗಳ ಬಗ್ಗೆ ತಜ್ಞರ ಸಮಿತಿಯೊಂದಿಗೆ ಸಭೆ ನಡೆಸಿ, ಹಂತಹಂತವಾಗಿ ನಿಯಮಗಳನ್ನು ಜಾರಿ ತರಲಾಗುವುದು ಎಂದು ಹೇಳಿದರು.

ಹೊಸ ವರ್ಷ ಆಚರಣೆ: ಪ್ರತಿ ಬಾರಿಯಂತೆ ಈ ವರ್ಷವೂ ಹೊಸ ವರ್ಷಕ್ಕೆ ಸಂಬಂಧಿಸಿದಂತೆ ನಿಯಮಗಳಿದ್ದು, ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ  ಕೆಲವು ಮಾರ್ಗಸೂಚಿಗಳನ್ನು ಸೇರಿಸಲಾಗುವುದು. ಜನಸಾಮಾನ್ಯರ ದೈನಂದಿನ ಚಟುವಟಿಕೆ, ಆರ್ಥಿಕತೆಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಜಾರಿ ಮಾಡಲಾಗುವುದು ಎಂದರು.

ಅಧಿವೇಶನ ಫಲಪ್ರದ: ಬೆಳಗಾವಿಯಲ್ಲಿನ ಅಧಿವೇಶನ ಫಲಪ್ರದ ಹಾಗೂ ಅರ್ಥಪೂರ್ಣವಾಗಬೇಕೆಂಬುದು ಸರಕಾರದ ಉದ್ದೇಶ. ಉತ್ತರ ಕರ್ನಾಟಕದ ಸಮಸ್ಯೆಗಳು ಮತ್ತುಯೋಜನೆಗಳ ಬಗ್ಗೆ ಸುದೀರ್ಘ ಚರ್ಚೆಯಾಗಬೇಕು. ವಿರೋಧಪಕ್ಷಗಳು ಹತ್ತು ಹಲವಾರು ವಿಷಯಗಳ ಬಗ್ಗೆ ಚರ್ಚಿಸಲಿವೆ. ಯಾವ ವಿಚಾರವೇ ಆಗಲಿ ಚರ್ಚಿಸಲು ರಾಜ್ಯ ಸರಕಾರ ಸಿದ್ಧವಿದೆ ಎಂದು ಹೇಳಿದರು.

Similar News