ಜನಾರ್ದನ ರೆಡ್ಡಿಯವರ ಹೊಸ ಪಕ್ಷಕ್ಕೆ ಶ್ರೀರಾಮುಲು ಹೋಗುವುದು ಯಾವಾಗ?: ಕಾಂಗ್ರೆಸ್ ಪ್ರಶ್ನೆ

Update: 2022-12-27 05:25 GMT

ಬೆಂಗಳೂರು, ಡಿ.27: ರಾಜಕೀಯ ವಲಯದಿಂದ ದೂರ ಉಳಿದಿದ್ದ ಬಿಜೆಪಿಯ ಮಾಜಿ ಸಚಿವ ಜನಾರ್ದನ ರೆಡ್ಡಿ ಈಗ ಮತ್ತೆ ಹೊಸ ಪಕ್ಷ 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ಘೋಷಣೆ ಮಾಡಿದ್ದು, ರೆಡ್ಡಿ ಅವರ ಆಪ್ತ ಗೆಳೆಯ ಸಚಿವ ಶ್ರೀರಾಮುಲು ಅವರು ಈ ಹೊಸ ಪಕ್ಷಕ್ಕೆ ಹೋಗುವುದು ಯಾವಾಗ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. 

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, 'ಗೆಳೆಯನ ಅಸಮಾಧಾನವನ್ನು ಹೈಕಮಾಂಡ್ ಜೊತೆ ಮಾತಾಡಿ ನ್ಯಾಯ ಒದಗಿಸುತ್ತೇನೆ ಎಂದಿದ್ದ ತಾವು ವಿಫಲರಾದಿರಾ ಅಥವಾ ಅಧಿಕಾರದ ರುಚಿ ಕಂಡಮೇಲೆ ರಾಜಕೀಯ ಜೀವನ ರೂಪಿಸಿಕೊಟ್ಟ ಗೆಳೆಯನನ್ನೇ ಮರೆತಿರಾ?' ಎಂದು ಶ್ರೀರಾಮುಲು ಅವರನ್ನು ಪ್ರಶ್ನೆ ಮಾಡಿದೆ. 

'ಜನಾರ್ದನ ರೆಡ್ಡಿಯವರ ಹೊಸ ಪಕ್ಷಕ್ಕೆ ಶ್ರೀರಾಮುಲು ಹೋಗುವುದು ಯಾವಾಗ? ಸ್ನೇಹ ಮುಖ್ಯವೋ ಅಧಿಕಾರ ಮುಖ್ಯವೋ?' ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. 

''ಕಾಲ ಬಂದಾಗ ಎಲ್ಲದಕ್ಕೂ ಉತ್ತರ ಕೊಡುತ್ತೇನೆ; ಶ್ರೀರಾಮುಲು 

''ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದು, ಈ ಹಿನ್ನೆಲೆಯಲ್ಲಿ ಹೊಸ ಪಕ್ಷದಿಂದ ನಮ್ಮ ಪಕ್ಷದ ಮೇಲೆ ಯಾವುದೇ ಪ್ರಭಾವ ಬೀಳುವುದಿಲ್ಲ. ಬಿಜೆಪಿ ಪಕ್ಷಕ್ಕೆ ಅದರದ್ದೇ ಆದ ಹಿನ್ನಲೆ ಮತ್ತು ಸಿದ್ಧಾಂತ ಇದೆ. ಅಷ್ಟೇ ಅಲ್ಲದೇ ಕಾರ್ಯಕರ್ತರು ನಮ್ಮ ಜೊತೆ ಇದ್ದಾರೆ, ಇದರಲ್ಲಿ ಯಾವುದೇ ಗೊಂದಲ ಆಗುವುದಿಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ ನಾನು, ಕಾಲ ಬಂದಾಗ ಎಲ್ಲದಕ್ಕೂ ಉತ್ತರ ಕೊಡುತ್ತೇನೆ'' ಎಂದು ಸಚಿವ ಶ್ರೀರಾಮುಲು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. 

ಇದನ್ನೂ ಓದಿ: ಮಾಜಿ ಸಚಿವ ಜನಾರ್ದನ ರೆಡ್ಡಿಯಿಂದ ಹೊಸ ಪಕ್ಷ ಘೋಷಣೆ

Similar News