ಮಂಗಳೂರು: ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಿಗೆ ಶಾಫಿ ಸಅದಿ ಅಭಿನಂದನೆ

Update: 2022-12-27 07:21 GMT

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಗೆ ಅಧ್ಯಕ್ಷರಾಗಿ ಪುನರಾಯ್ಕೆಯಾದ ಹಾಜಿ ಕೆ‌.ಎಸ್.ಮುಹಮ್ಮದ್ ಮಸೂದ್ ಅವರನ್ನು ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಮೌಲಾನಾ ಶಾಫಿ ಸಅದಿ ಅವರು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ಈ ಸಂರ್ಭದಲ್ಲಿ ಉಪಾಧ್ಯಕ್ಷರಾದ ಹಾಜಿ ಇಬ್ರಾಹಿಂ ಕೋಡಿಜಾಲ್, ಹಾಜಿ ಬಿ.ಎಂ. ಮುಮ್ತಾಝ್ ಅಲಿ, ಹಾಜಿ ಎಸ್.ಎಂ. ರಶೀದ್, ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಹಾಜಿ ನಾಸೀರ್ ಲಕ್ಕಿಸ್ಟಾರ್ ಉಪಸ್ಥಿತರಿದ್ದರು.

Similar News