ಸಾಗರ | ಟಿಪ್ಪರ್ ಢಿಕ್ಕಿ: ಮೂವರು ಕಾಲೇಜು ವಿದ್ಯಾರ್ಥಿನಿಯರಿಗೆ ಗಾಯ
ಸಾಗರ, ಡಿ.28: ಟಿಪ್ಪರ್ ಢಿಕ್ಕಿ(Accident) ಹೊಡೆದ ಪರಿಣಾಮ ಕಾಲೇಜಿಗೆ ನಡೆದುಕೊಂಡು ಹೋಗುತ್ತಿದ್ದ ಮೂವರು ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ಸಾಗರದ ಸಣ್ಣಮನೆ ಸೇತುವೆ ಬಳಿ ಇಂದು ಬೆಳಗ್ಗೆ ನಡೆದಿದೆ.
ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಪ್ರತಿಮಾ, ಐಶ್ವರ್ಯಾ ಹಾಗೂ ಅಂಕಿತಾ ಗಾಯಗೊಂಡವರು. ಈ ಪೈಕಿ ಪ್ರತಿಮಾ ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಮೂವರು ವಿದ್ಯಾರ್ಥಿನಿಯರು ಹಾಸ್ಟೆಲ್ ನಿಂದ ಕಾಲೇಜಿಗೆ ನಡೆದುಕೊಂಡು ಹೋಗುತ್ತಿದ್ದಾಗ ಸಾಗರದ ಸಣ್ಣಮನೆ ಸೇತುವೆ ಬಳಿ ಎದುರಿನಿಂದ ವೇಗವಾಗಿ ಬಂದ ಟಿಪ್ಪರ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಚಾಲಕನ ಅತೀ ವೇಗ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಇದನ್ನೂ ಓದಿ: ಹಾವೇರಿಯಲ್ಲಿ ಕಾಸರಗೋಡಿನ ಕಾರು ಅಪಘಾತ ಪ್ರಕರಣ: ಗಾಯಾಳು ಮಗು ಮೃತ್ಯು, ಮೃತರ ಸಂಖ್ಯೆ ಮೂರಕ್ಕೆ ಏರಿಕೆ