×
Ad

ಬಿ.ಸಿ.ರೋಡ್: ಜಲೀಲ್ ಹತ್ಯೆ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Update: 2022-12-28 23:47 IST

ಬಂಟ್ವಾಳ: ಸುರತ್ಕಲ್ ನಲ್ಲಿ ನಡೆದ ಜಲೀಲ್ ಹತ್ಯೆಯನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ವತಿಯಿಂದ ಬಿ.ಸಿ.ರೋಡ್ - ಕೈಕಂಬದಲ್ಲಿ ಪ್ರತಿಭಟನೆ ನಡೆಯಿತು. 

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಪರಂಗಿಪೇಟೆ, ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಮೂಲಕ ಮತ ಸೆಳೆಯುವ ಪ್ರಯತ್ನ ಮಾಡುತ್ತವೆ. ಆದರೆ ಬಿಜೆಪಿ ಮತ್ತು ಆರೆಸ್ಸೆಸ್  ಅಮಾಯಕರ ಹೆಣ ಬೀಳಿಸುವ ಮೂಲಕ ಚುನಾವಣೆಗೆ ಪೂರ್ವ ತಯಾರಿ ನಡೆಸುತ್ತವೆ. ದಕ್ಷಿಣ ಕನ್ನಡದಲ್ಲಿ ನಡೆಯುತ್ತಿರುವ ಒಂದೊಂದು ಕೊಲೆಯು ಕೂಡ ಬಿಜೆಪಿಯ ಚುನಾವಣಾ ಪೂರ್ವ ತಯಾರಿ ಎಂದು ಅವರು ಆರೋಪಿಸಿದ್ದಾರೆ. 

ಈ ಸಂದರ್ಭ ಬಂಟ್ವಾಳ ಕ್ಷೇತ್ರದ ಪಕ್ಷದ ಉಸ್ತುವಾರಿ ಎಸ್.ಎಚ್. ಶಾಹುಲ್ ಹಮೀದ್, ಪಕ್ಷದ ರಾಜ್ಯ ಸಮಿತಿ ಸದಸ್ಯ ಅಕ್ಬರ್ ಅಲಿ ಪೊನ್ನೋಡಿ ಮಾತನಾಡಿದರು.    

ಕ್ಷೇತ್ರ ಸಮಿತಿ ಅಧ್ಯಕ್ಷ ಮೂನಿಷ್ ಆಲಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಸಮಿತಿ ಸದಸ್ಯ ಯೂಸುಫ್ ಆಲಡ್ಕ, ಖಾದರ್ ಫರಂಗಿಪೇಟೆ, ಕ್ಷೇತ್ರ ಸಮಿತಿ ಕಾರ್ಯದರ್ಶಿ ಕಲಂದರ್ ಪರ್ತಿಪ್ಪಾಡಿ, ಪಕ್ಷ ಪ್ರಮುಖರಾದ ಅನ್ವರ್ ಬಡಕಬೈಲು, ಅಶ್ರಫ್ ತಲಪಾಡಿ,  ಮುಬಾರಕ್ ಗೂಡಿನಬಳಿ, ಶರೀಫ್ ವಳವೂರು ಮತ್ತಿತರರು ಉಪಸ್ಥಿತರಿದ್ದರು.

Similar News