ಕೇರಳ: ನಿಷೇಧಿತ ಸಂಘಟನೆ ಪಿಎಫ್ ಐ ನಾಯಕರ ನಿವಾಸಗಳು ಸೇರಿದಂತೆ ಹಲವು ಸ್ಥಳಗಳಲ್ಲಿ ಎನ್‌ಐಎ ದಾಳಿ

Update: 2022-12-29 09:02 GMT

ತಿರುವನಂತಪುರ: ಕೇರಳದಲ್ಲಿ ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್ ಐ)ಎರಡನೇ ಹಂತದ ನಾಯಕರ ನಿವಾಸಗಳು ಸೇರಿದಂತೆ ಹಲವು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ.

ನಿನ್ನೆ ತಡರಾತ್ರಿ ಆರಂಭವಾದ ದಾಳಿಗಳು ಇನ್ನೂ ನಡೆಯುತ್ತಿವೆ ಎಂದು ಕೇರಳ ಪೊಲೀಸ್ ಮೂಲಗಳು ತಿಳಿಸಿವೆ.

ಎನ್‌ಐಎ ನೇತೃತ್ವದ ಬಹು-ಏಜೆನ್ಸಿ ತಂಡಗಳು ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆಂದು ಆರೋಪಿಸಿ 15 ರಾಜ್ಯಗಳ ಅನೇಕ ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಪಿಎಫ್ ಐ ಸಂಘಟನೆಯ ಪ್ರಮುಖ ನಾಯಕರು ಸೇರಿದಂತೆ ಹಲವಾರು ಪದಾಧಿಕಾರಿಗಳನ್ನು ಸೆಪ್ಟೆಂಬರ್‌ನಲ್ಲಿ ಬಂಧಿಸಿದ್ದವು.

Similar News