×
Ad

ಕಳಸಾ-ಬಂಡೂರಿ ನಾಲಾ ಯೋಜನೆಯ ವಿಸ್ತೃತ ಯೋಜನಾ ವರದಿ ತಯಾರಿಕೆಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ

Update: 2022-12-29 15:11 IST

ಬೆಂಗಳೂರು, ಡಿ.29: ಉತ್ತರ ಕರ್ನಾಟಕ ಭಾಗದ ಮಹತ್ವಾಕಾಂಕ್ಷೆಯ ಕಳಸಾ-ಬಂಡೂರಿ ನಾಲಾ ಯೋಜನೆಯ ವಿಸ್ತೃತ ಯೋಜನಾ ವರದಿ ತಯಾರಿಕೆಗೆ ಕೇಂದ್ರ ಜಲ ಆಯೋಗ ಅನುಮತಿ ನೀಡಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ. 

ಈ ಸಂಬಂಧ ಟ್ವೀಟ್ ಮಾಡಿರುವ ಅವರು, 'ಕರ್ನಾಟಕಕ್ಕೆ ಅತ್ಯಂತ ಆವಶ್ಯಕವಾದ ಈ ಯೋಜನೆಗೆ ಅನುಮೋದನೆ ದೊರೆಯಲು ಸಹಕರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್, ರಚನಾತ್ಮಕ ಯೋಜನಾ ವರದಿ ನಿರೂಪಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೆ ಅಭಿನಂದನೆಗಳು' ಎಂದು ಹೇಳಿದ್ದಾರೆ.

Similar News