×
Ad

ಮಧ್ಯಪ್ರದೇಶ: ʼಜೈ ಶ್ರೀರಾಂʼ ಘೋಷಣೆ ಕೂಗುವಂತೆ ಒತ್ತಾಯಿಸಿ 10 ವರ್ಷದ ಬಾಲಕನಿಗೆ ಥಳಿತ

Update: 2022-12-29 20:11 IST

ಖಾಂಡ್ವಾ: ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯ ಪಂಧಾನಾ ಪ್ರದೇಶದಲ್ಲಿ 10 ವರ್ಷದ ಮುಸ್ಲಿಂ ಬಾಲಕನನ್ನು "ಜೈ ಶ್ರೀ ರಾಮ್" ಎಂದು ಕೂಗುವಂತೆ ಒತ್ತಾಯಿಸಿ ಥಳಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಮತ್ತು 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವ) ಅಡಿಯಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಬುಧವಾರ ಸಂಜೆ 5ನೇ ತರಗತಿ ವಿದ್ಯಾರ್ಥಿಯಾಗಿರುವ ಬಾಲಕ ಟ್ಯೂಷನ್ ಸೆಂಟರ್‌ಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ.

ಆತನ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ನಂತರ ಎಫ್‌ಐಆರ್ ದಾಖಲಿಸಲಾಗಿದೆ.

ಆರೋಪಿಯನ್ನು ಬಂಧಿಸುವ ಪ್ರಯತ್ನ ಮುಂದುವರಿದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿಯು 21 ವರ್ಷದ ಕಾರ್ಮಿಕನಾಗಿದ್ದು, ಘಟನೆಯ ಸಮಯದಲ್ಲಿ ಆತ ಮದ್ಯ ಸೇವಿಸಿರುವ ಸಾಧ್ಯತೆ ಇದೆ ಎಂದು ಚೌಹಾಣ್ ಹೇಳಿದ್ದಾರೆ. ಆದರೂ, ಆರೋಪಿ ಯಾವುದೇ ಸಂಘಟನೆಗೆ ಸೇರಿದವನಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Similar News