ಭಟ್ಕಳ: ಅಂಜುಮನ್ ಶತಮಾನೋತ್ಸವ ಸಮಾರೋಪ ಸಮಾರಂಭ
ಭಟ್ಕಳ: ಉ.ಕ.ಜಿಲ್ಲೆಯ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಯಾಗಿರುವ ಅಂಜುಮನ್ ಹಾಮಿಯೇ ಮುಸ್ಲಿಮೀನ್, ಇದರ ಶತಮಾನೋತ್ಸವ ಸಮಾರೋಪ ಸಮಾರಂಭವು ಜ.1 ಮತ್ತು 2 ರಂದು ಅಂಜುಮನಾಬಾದ್ ನಲ್ಲಿ ನಡೆಯಲಿದೆ ಎಂದು ಅಂಜುಮನ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮುಹಮ್ಮದ್ ಮುಝಮ್ಮಿಲ್ ಕಾಝೀಯಾ ತಿಳಿಸಿದ್ದಾರೆ.
ಅವರು ಗುರುವಾರ ಅಂಜುಮನ್ ಕಾರ್ಯಾಲಯದಲ್ಲಿ ಈ ಕುರಿತು ಮಾಹಿತಿ ನೀಡಿ ಮಾತನಾಡಿದರು.
ಸಮಾರೋಪ ಸಮಾರಂಭವು ಎರಡು ದಿನಗಳ ಕಾಲ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸುಪ್ರಿಂ ಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು, ಭಾರತದ ನಿವೃತ್ತ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ.ಕುರೇಶಿ, ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಜಮೀಯತುಲ್ ಉಲೇಮಾ ಹಿಂದ್ ಉತ್ತರಪ್ರದೇಶದ ಅಧ್ಯಕ್ಷ ಮೌಲಾನ ಅಶ್ಹದ್ ರಷಾದಿ ಭಾಗವಹಿಸಲಿದ್ದಾರೆ ಎಂದು ಮುಹಮ್ಮದ್ ಮುಝಮ್ಮಿಲ್ ಕಾಝೀಯಾ ತಿಳಿಸಿದ್ದಾರೆ
ಗೌರವ ಅತಿಥಿಗಳಾಗಿ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ್, ಅಂತರಾಷ್ಟ್ರೀಯ ಖ್ಯಾತಿಯ ಪ್ರೇರಕ ಭಾಷಣಗಾರ ರಾಷಿದ್ ಗಝಾಲಿ, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಝೀಂ ಉಪಸ್ಥಿತರಿರುವರು ಎಂದು ಅವರು ಮಾಹಿತಿ ನೀಡಿದರು.
ಜ 2 ರಂದು ನಡೆಯುವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮುಖ್ಯ ಅತಿಥಿಯಾಗಿ ಸುಪ್ರಿಂ ಕೋರ್ಟ್‍ನ ನಿವೃತ್ತ ನ್ಯಾಯದೀಶ ಜಸ್ಟಿಸ್ ಮಾರ್ಕಂಡೇಯ ಕಾಟ್ಜು, ಭಾರತದ ನಿವೃತ್ತ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ.ಕುರೇಶಿ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಭಾಗವಹಿಸುತ್ತಿದ್ದು, ಗೌರವ ಅತಿಥಿಯಾಗಿ ರಾಜ್ಯಸಭಾ ಸದಸ್ಯ ಡಾ.ಸೈಯ್ಯದ್ ನಾಸಿರ್ ಹುಸೇನ್, ವಿಧಾನಪರಿಷತ್ ಸದಸ್ಯ ಬಿ.ಎಂ.ಫಾರೂಖ್ ಭಾಗವಹಿಸಲಿದ್ದಾರೆ.
ಎರಡು ದಿನಗಳ ಸಮಾರಂಭದ ಅಧ್ಯಕ್ಷತೆಯನ್ನು ಅಂಜುಮನ್ ಸಂಸ್ಥೆಯ ಅಧ್ಯಕ್ಷ ಮುಹಮ್ಮದ್ ಮುಝಮ್ಮಿಲ್ ಕಾಝೀಯಾ ವಹಿಸಲಿದ್ದಾರೆ.
ಮದ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಅಂಜುಮನ್ ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಮುಝಮ್ಮಿಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಅಂಜುಮನ್ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸಿದ್ದೀಖ್ ಇಸ್ಮಾಯಿಲ್, ಶತಮಾನೋತ್ಸವ ಸಮಾರಂಭದ ಸಂಚಾಲಕ ಮುಹಮ್ಮದ್ ತನ್ವೀರ್ ಕಾಸರಗೋಡ್, ಅಂಜುಮನ್ ಅಲುಮ್ನಿ ಕಮಿಟಿಯ ಸಂಚಾಲಕ ಮುಹಮ್ಮದ್ ಅಶ್ಫಾಖ್ ಸಾದಾ, ಅಫ್ತಾಬ್ ಹುಸೇನ್ ಕೋಲಾ, ಹೆಚ್ಚುವರಿ ಪ್ರ.ಕಾ ಇಸ್ಹಾಖ್ ಶಾಬಂದ್ರಿ, ಮುಬಶ್ವಿರ್ ಹಲ್ಲಾರೆ ಸೇರಿದಂತೆ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.