ಭಟ್ಕಳ: ಖಾಸಗಿ ಬಸ್ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು
Update: 2022-12-29 23:29 IST
ಭಟ್ಕಳ: ಶಿರಾಲಿ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ 69 ವರ್ಷದ ಪಾದಚಾರಿಯೊಬ್ಬರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಭಟ್ಕಳದಲ್ಲಿ ಗುರುವಾರ ನಡೆದಿದೆ.
ಮೃತರನ್ನು ಹೊನಪ್ಪ ತಿಮ್ಮಯ್ಯ ನಾಯ್ಕ ಎಂದು ಗುರುತಿಸಲಾಗಿದೆ.
ಬಸ್ ಹುಬ್ಬಳ್ಳಿಯಿಂದ ಮಂಗಳೂರು ಕಡೆಗೆ ಬರುತ್ತಿತ್ತು. ಪಾದಚಾರಿ ಹೆದ್ದಾರಿ ದಾಟಲು ಯತ್ನಿಸುತ್ತಿದ್ದಂತೆಯೇ ಬಸ್ ಚಾಲಕನ ನಿಯಂತ್ರಣ ತಪ್ಪಿದೆ ಎಂದು ತಿಳಿದುಬಂದಿದೆ.
ಮುರ್ಡೇಶ್ವರ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದು, ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.