×
Ad

ಸಾರಿಗೆ ನೌಕರರು ಮುಂದಿನ 6 ತಿಂಗಳು ಮುಷ್ಕರ ನಡೆಸದಂತೆ ಆದೇಶ

Update: 2022-12-30 01:42 IST

ಬೆಂಗಳೂರು: ಕೆಎಸ್ಸಾರ್ಟಿಸಿ (KSRTC) ನೌಕರರು ಮುಂದಿನ 6 ತಿಂಗಳು ಮುಷ್ಕರ ನಡೆಸದಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಕರ್ನಾಟಕ ಆಗತ್ಯ ಸೇವಾ ನಿರ್ವಾಹಣೆ ಕಾಯ್ದೆ 2013 ರ ಅಡಿ ಆದೇಶ ಹೊರಡಿಸಿದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ದಿನಾಂಕ ಜನವರಿ 1 ರಿಂದ ಜೂನ್ 30ರವರೆಗೆ ನಿಗಮದಲ್ಲಿ ಮುಷ್ಕರ ನಿರ್ಬಂಧಿಸಿ ಅಧಿಸೂಚನೆ ಹೊರಡಿಸಲಾಗಿದೆ.

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಬೆಳಗಾವಿ ಸುವರ್ಣಸೌಧದ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. 

Similar News