ಸುಟ್ಟು ಕರಕಲಾಗಿದ್ದ ಕಾರಿನಿಂದ ಕಿಟಿಕಿ ಒಡೆದು ಹೊರ ಬಂದ ರಿಷಭ್ ಪಂತ್
ಹೊಸದಿಲ್ಲಿ: ಕ್ರಿಕೆಟಿಗ ರಿಷಬ್ ಪಂತ್ Rishabh Pant ಅವರು ಶುಕ್ರವಾರ ಮುಂಜಾನೆ 5:30ಕ್ಕೆ ದಿಲ್ಲಿಯಿಂದ ಉತ್ತರಾಖಂಡಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದ ಸಮಯದಲ್ಲಿ ಪಂತ್ ಕಾರಿನಲ್ಲಿ ಒಬ್ಬರೇ ಇದ್ದರು. ಕಾರಿಗೆ ಬೆಂಕಿ ಹೊತ್ತಿಕೊಂಡ ನಂತರ ವಾಹನದಿಂದ ತಪ್ಪಿಸಿಕೊಳ್ಳಲು ವಿಂಡ್‌ಸ್ಕ್ರೀನ್ ಒಡೆದಿದ್ದಾರೆ ಎಂದು ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ಖಚಿತಪಡಿಸಿದ್ದಾರೆ ಎಂದು NDTV ವರದಿ ಮಾಡಿದೆ.
ಡಿಕ್ಕಿಯ ನಂತರ ರಿಷಬ್ ಪಂತ್ ಅವರ ಮರ್ಸಿಡಿಸ್ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ.
ರಿಷಬ್ ಪಂತ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಸ್ತುತ ಅವರ ಸೊಂಟದ ಸುತ್ತ ಗಾಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಅಪಾಯದಿಂದ ಪಾರಾಗಿದ್ದಾರೆ ಮತ್ತು ಪ್ರಜ್ಞೆಯಲ್ಲಿದ್ದಾರೆ ಎಂದು ಮ್ಯಾಕ್ಸ್ ಆಸ್ಪತ್ರೆಯ ಡಾ.ಆಶಿಶ್ ಯಾಗ್ನಿಕ್ ಹೇಳಿದ್ದಾರೆ.
25 ವರ್ಷ ವಯಸ್ಸಿನ ಪಂತ್ ಕಾರು ಚಾಲನೆ ಮಾಡುವಾಗ ಕಾರಿನ ನಿಯಂತ್ರಣ ಕಳೆದುಕೊಂಡರು ಎಂದು ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ಹೇಳಿದ್ದಾರೆ.
ಶ್ರೀಲಂಕಾ ವಿರುದ್ಧದ ಸರಣಿಗಾಗಿ ಇತ್ತೀಚೆಗೆ ಪ್ರಕಟಿಸಲಾದ ಟ್ವೆಂಟಿ-20 ತಂಡದಿಂದ ಪಂತ್ ಅವರನ್ನು ಕೈಬಿಡಲಾಯಿತು. ಆಸ್ಟ್ರೇಲಿಯಾ ವಿರುದ್ಧದ ಫೆಬ್ರವರಿಯಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಗಿಂತ ಫಿಟ್ನೆಸ್ ಗಾಗಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಸೇರಬೇಕಿತ್ತು.