ಉಡುಪಿ | ಬೈಕ್-ಲಾರಿ ಅಪಘಾತ: ಮಂಗಳೂರಿನ ಅಬಕಾರಿ ಇಲಾಖೆಯ ಸಬ್ ಇನ್ ಸ್ಪೆಕ್ಟರ್ ಮೃತ್ಯು

Update: 2022-12-30 05:29 GMT

ಉಡುಪಿ: ಬೈಕ್ ಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಮಂಗಳೂರು ಅಬಕಾರಿ ಇಲಾಖೆಯ ಸಬ್ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಉಡುಪಿ ಅಂಬಾಗಿಲಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ರಾತ್ರಿ ನಡೆದಿರುವುದಾಗಿ ವರದಿಯಾಗಿದೆ.

ಅತೀ ವೇಗದಿಂದ ಲಾರಿಯನ್ನು ಚಲಾಯಿಸಿದ ಚಾಲಕ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಅಬಕಾರಿ ಇಲಾಖೆಯ ಸಬ್ ಇನ್ ಸ್ಪೆಕ್ಟರ್, ಬ್ರಹ್ಮಾವರ ಉಪ್ಪೂರು ನಿವಾಸಿ ಶಂಕರ್(52) ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಶಂಕರ್ ಅವರನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಉಡುಪಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Similar News