ಗುಜರಾತ್ ನ ಗಾಂಧಿನಗರದಲ್ಲಿ ತಾಯಿ ಹೀರಾಬೆನ್ ಅಂತ್ಯಕ್ರಿಯೆ ನೆರವೇರಿಸಿದ ಪ್ರಧಾನಿ ಮೋದಿ
Update: 2022-12-30 11:00 IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಗುಜರಾತ್ ನ ಗಾಂಧಿನಗರದ ಸೆಕ್ಟರ್ 30 ನಲ್ಲಿರುವ ಹಿಂದೂ ಸ್ಮಶಾನದಲ್ಲಿ ತಾಯಿ ಹೀರಾಬೆನ್ ಅವರ ಅಂತ್ಯಕ್ರಿಯೆಯನ್ನು ಸಂಪೂರ್ಣ ವಿಧಿವಿಧಾನಗಳ ಪ್ರಕಾರ ನೆರವೇರಿಸಿದರು.
ಪ್ರಧಾನಿ ಮೋದಿ ಹಾಗೂ ಅವರ ಕುಟುಂಬದ ಆಪ್ತ ಸದಸ್ಯರಲ್ಲದೆ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕೂಡ ಗಾಂಧಿನಗರದಲ್ಲಿರುವ ಸ್ಮಶಾನದಲ್ಲಿ ಹೀರಾಬಾ ಮೋದಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು.
ಪ್ರಧಾನಿ ಮೋದಿಯವರು ಪಶ್ಚಿಮ ಬಂಗಾಳದಲ್ಲಿ ಇಂದು 7,800 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಆರಂಭಿಸಬೇಕಾಗಿತ್ತು. ಪ್ರಧಾನಿಗಳು ತಮ್ಮ ತಾಯಿಯ ಅಂತ್ಯಕ್ರಿಯೆ ನೆರವೇರಿಸಿದ ನಂತರ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ(ಪಿಎಂಒ) ತಿಳಿಸಿದೆ.