ಬೆಳಗಾವಿ: ಎಎಸ್ಸೈ ಆತ್ಮಹತ್ಯೆ

Update: 2022-12-30 17:58 GMT

ಬೆಳಗಾವಿ, ಡಿ.30: ಜಿಲ್ಲೆಯ ಅಥಣಿ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್‌ಐ ರಾಮಲಿಂಗ ನಾಯಕ್ (49) ಅವರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.

ರಾಯಭಾಗ ತಾಲೂಕಿನ ಅಳಗವಾಡಿ ಗ್ರಾಮದ ಬೀರೇಶ್ವರ ದೇವಸ್ಥಾನದ ಪಕ್ಕ ಶೆಡ್‌ವೊಂದರಲ್ಲಿ ಕಂಬದಲ್ಲಿ ಶವವಾಗಿ ಎಎಸ್​ಐ ಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಕೆಲವು ದಿನಗಳಿಂದ ಪೊಲೀಸ್ ಅಧಿಕಾರಿ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. 

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ‌ ಸಂಬಂಧ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News