ಧಾರವಾಡ: ಮದುವೆಗೆ ಹೆಣ್ಣು ಸಿಕ್ಕಿಲ್ಲ ಎಂದು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ
Update: 2022-12-31 14:11 IST
ಧಾರವಾಡ, ಡಿ. 31: ಮದುವೆಗೆ ಹೆಣ್ಣು ಸಿಕ್ಕಿಲ್ಲ ಎಂದು ಮನನೊಂದು ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದಲ್ಲಿ ವರದಿಯಾಗಿದೆ.
ಆತ್ಮಹತ್ಯಗೆ ಯತ್ನಿಸಿದ ಯುವಕನನ್ನು ಸಂತೋಷ್ ಕೊರಡಿ ಎಂದು ಗುರುತಿಸಲಾಗಿದೆ.
ವಯಸ್ಸಾದರೂ ಮದುವೆಯಾಗಿಲ್ಲ ಎಂದು ಮನನೊಂದು ಸಂತೋಷ್ ಕೊರಡಿ ಗ್ರಾಮದ ಸ್ಮಶಾನದಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.
ವಿಷಯ ತಿಳಿದು ಸ್ಥಳೀಯರು ಆತನನ್ನು ರಕ್ಷಣೆ ಮಾಡಿದ್ದಾರೆ. ಸದ್ಯ ಗಾಯಗೊಂಡಿರುವ ಸಂತೋಷ್ ಗೆ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.