ಟಿಕೆಟ್ ಗೊಂದಲ; ಕೆಪಿಸಿಸಿ ಕಚೇರಿಯಲ್ಲಿ ಕೈ- ಕೈ ಮಿಲಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು
Update: 2022-12-31 16:07 IST
ಬೆಂಗಳರು, ಡಿ.31: ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಕೈ-ಕೈ ಮೀಲಾಯಿಸಿದ್ದಾರೆ.
ಮಾಜಿ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ರಾಜಾಜಿನಗರ ಕ್ಷೇತ್ರದ ಟಿಕೆಟ್ ಗೊಂದಲದ ಬಗ್ಗೆ ಚರ್ಚೆ ನಡೆಯುತ್ತಿದ್ದ ವೇಳೆ ಮೂಲ, ವಲಸಿಗರು ಎಂಬ ಗಲಾಟೆ ನಡೆದಿದೆ ಎನ್ನಲಾಗಿದೆ.
'ಸ್ಥಳೀಯರಲ್ಲದವರು ಟಿಕೆಟ್ ಗೆ ಅರ್ಜಿಹಾಕಿದ್ದಾರೆ. ಅಂತವರಿಗೆ ಟಿಕೆಟ್ ನೀಡುವುದು ಬೇಡ. ಮನೋಹರ್,ಪದ್ಮಾವತಿ ಸ್ಥಳೀಯರು ಅವರಿಬ್ಬರಲ್ಲಿ ಒಬ್ಬರಿಗೆ ಟಿಕೆಟ್ ನೀಡುವಂತೆ ಕಾರ್ಯಕರ್ತರು ಪಟ್ಟು ಹಿಡಿದಿದ್ದು, ಈ ವೇಳೆ ಬಣಗಳ ನಡುವೆ ಮಾತಿಗೆ ಮಾತು ಬೆಳೆದು ಕಾರ್ಯಕರ್ತರ ಗಲಾಟೆ ಕೈ-ಕೈ ಮೀಲಾಯಿಸುವ ಹಂತಕ್ಕೆ ತಲುಪಿದೆ ಎಂದು ಹೇಳಲಾಗಿದೆ.