ಸುರತ್ಕಲ್: ಸಮುದ್ರಕ್ಕೆ ಇಳಿದಿದ್ದ ವಿದ್ಯಾರ್ಥಿ ನೀರುಪಾಲು
ಸುರತ್ಕಲ್: NITK ಲೈಟ್‌ಹೌಸ್ ಬೀಚ್‌ನಲ್ಲಿ ಸಮುದ್ರಕ್ಕೆ ಇಳಿದಿದ್ದ ಇಬ್ಬರು ಸ್ನೇಹಿತರ ಪೈಕಿ ಓರ್ವ ನಾಪತ್ತೆಯಾಗಿರುವ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪತ್ತೆಯಾದ ಯುವಕ ಕಾನ ನಿವಾಸಿ ಸುರೇಶ್ ಪ್ರಸಾದ್ ಯಾದವ್ ಅವರ ಮಗ ಸತ್ಯಂ (18) ಎಂದು ಗುರುತಿಸಲಾಗಿದೆ. ಇವರು ಕೆಪಿಟಿ ತಾಂತ್ರಿಕ ಕಾಲೇಜಿನಲ್ಲಿ ಡಿಪ್ಲೋಮ ಅಂತಿಮ ವರ್ಷದ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.
ಸತ್ಯಂ ಮತ್ತು ಅವರ ಸ್ನೇಹಿತ ಎಂಆರ್‌ಪಿಎಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಪ್ರಭಾಕರನ್ (19) ಎಂಬವರು ಜೊತೆಯಾಗಿ ಮಧ್ಯಾಹ್ನ 3.15ರ ಸುಮಾರಿಗೆ ಲೈಟ್‌ಹೌಸ್‌ಬೀಚ್‌ಗೆ ಬಂದಿದ್ದರು. ಈ ವೇಳೆ ಸ್ನೇಹಿತರಿಬ್ಬರೂ ಸಮುದ್ರಕ್ಕೆ ಇಳಿದಿದ್ದು, ಸತ್ಯಂ ನೀರಿನ ಸೆಳೆತಕ್ಕೆ ಸಿಲುಕಿ ನೀರುಪಾಲಾಗಿದ್ದಾರೆ ಎನ್ನಲಾಗಿದೆ. ಸದ್ಯ ಸ್ಥಳೀಯ ಮೀನುಗಾರರು ಸತ್ಯಂ ಅವರ ಹುಡುಕಾಟದಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪ್ರಭಾಕರನ್ ಅವರಿಂದ ಮಾಹಿತಿ ಕಲೆಹಾಕಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.