×
Ad

ಸುರತ್ಕಲ್: ಜಲೀಲ್ ನಿವಾಸಕ್ಕೆ ಎಸ್‌ಡಿಪಿಐ ನಿಯೋಗ ಭೇಟಿ

Update: 2022-12-31 19:06 IST

ಸುರತ್ಕಲ್: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಸುರತ್ಕಲ್ ಸಮೀಪದ ಕಾಟಿಪಳ್ಳದ ನಿವಾಸಿ ಜಲೀಲ್‌ರ ನಿವಾಸಕ್ಕೆ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್ ಬಿ.ಆರ್. ನೇತೃತ್ವದ ನಿಯೋಗವು ಶುಕ್ರವಾರ  ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದೆ. 

ಈ ಸಂದರ್ಭ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್, ರಾಜ್ಯ ಸಮಿತಿಯ ಸದಸ್ಯ ರಿಯಾಝ್ ಕಡಂಬು, ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅನ್ವರ್ ಸಾದಾತ್ ಬಜತ್ತೂರು, ಜಮಾಲ್ ಜೋಕಟ್ಟೆ, ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷ ಅಕ್ಬರ್ ಕುದ್ರೋಳಿ, ಸುರತ್ಕಲ್ ಬ್ಲಾಕ್ ಅಧ್ಯಕ್ಷ ಸಲಾಂ ಕಾನ, ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಜೊತೆ ಕಾರ್ಯದರ್ಶಿ ಅಝರ್ ಚೊಕ್ಕಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

Similar News