×
Ad

ಕೇಂದ್ರ ಗೃಹ ಸಚಿವ ಅಮಿತ್‌ ಶಾರನ್ನು ಭೇಟಿಯಾದ ಕ್ರಿಕೆಟರ್ ಹಾರ್ದಿಕ್‌ ಪಾಂಡ್ಯ

Update: 2022-12-31 21:41 IST

ಹೊಸದಿಲ್ಲಿ: ಭಾರತೀಯ ಕ್ರಿಕೆಟ್‌ ತಂಡದ ಆಲ್‌ರೌಂಡರ್ ಹಾರ್ದಿಕ್‌ ಪಾಂಡ್ಯ ಅವರು ಗೃಹ ಸಚಿವ ಅಮಿತ್‌ ಶಾ ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.

ಶ್ರೀಲಂಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಟಿ20 ಕ್ರಿಕೆಟ್‌ ಸರಣಿಗೆ ಭಾರತ ತಂಡವನ್ನು ಮುನ್ನಡೆಸಲಿರುವ ಹಾರ್ದಿಕ್‌ ಪಾಂಡ್ಯ ಅವರು  ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಹಾರ್ದಿಕ್‌ ಪಾಂಡ್ಯ ತಮ್ಮ ಸಹೋದರ ಕೃನಾಲ್‌ ಪಾಂಡ್ಯರೊಂದಿಗೆ ಅಮಿತ್‌ ಶಾ ನಿವಾಸಕ್ಕೆ ತೆರಳಿ ಮಹತ್ವದ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಹಾರ್ದಿಕ್‌ ಪಾಂಡ್ಯ ನಿಮ್ಮ ಭೇಟಿ ನಮಗೆ ಒಂದು ಸುಯೋಗ ಮತ್ತು ಗೌರವವಾಗಿತ್ತು ಎಂದು ಹೇಳಿದ್ದಾರೆ.

“ಗೌರವಾನ್ವಿತ ಗೃಹ ಸಚಿವ ಶ್ರೀ ಅಮಿತ್‌ ಶಾ ಜೀ ನಿಮ್ಮೊಂದಿಗೆ ಅಮೂಲ್ಯ ಸಮಯವನ್ನು ಕಳೆಯಲು ನಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಧನ್ಯವಾದಗಳು. ನಿಮ್ಮನ್ನು ಭೇಟಿಯಾಗುವುದು ನಮಗೆ ಗೌರವ” ಎಂದು ಪಾಂಡ್ಯ ಟ್ವೀಟ್‌ ಮಾಡಿದ್ದಾರೆ.

Similar News