ಗುರುಲಿಂಗಸ್ವಾಮಿ ಹೆಸರಿನಲ್ಲಿ ಕೆಯುಡಬ್ಲ್ಯೂಜೆ ವಾರ್ಷಿಕ ಪ್ರಶಸ್ತಿ

Update: 2022-12-31 16:54 GMT

ಬೆಂಗಳೂರು, ಡಿ.31: ಮುದ್ರಣ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಕ್ರಿಯಾಶೀಲ ಪತ್ರಕರ್ತರಾಗಿ, ಸಿಎಂ ಮಾಧ್ಯಮ ಸಂಯೋಜಕರಾಗಿಯೂ ಸೇವೆ ಸಲ್ಲಿಸಿದ್ದ ಗುರುಲಿಂಗ ಸ್ವಾಮಿ ಹೊಳಿಮಠ ಅವರ ಹೆಸರಿನಲ್ಲಿ ಕೆಯುಡಬ್ಲ್ಯೂಜೆ ವಾರ್ಷಿಕ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗಿದ್ದು, ವಿಜಯಪುರದಲ್ಲಿ 2023ರ ಜನವರಿ 9, 10ರಂದು ನಡೆಯಲಿರುವ ಪತ್ರಕರ್ತರ ಸಮ್ಮೇಳನದಲ್ಲಿ ಗುರುಲಿಂಗ ಸ್ವಾಮಿ ಹೊಳಿಮಠ ಹೆಸರಿನ ಪ್ರಶಸ್ತಿಯನ್ನು ಸಿಎಂ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದೆ.

Similar News