×
Ad

ಗದಗ | ಬಿಜೆಪಿ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಕಾರಿಗೆ ಕಲ್ಲು: ಪೊಲೀಸರಿಂದ ಲಘು ಲಾಠಿ ಪ್ರಹಾರ

Update: 2023-04-17 21:02 IST
Byline : Ashwani

ಗದಗ, ಎ. 17: ಗದಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಅವರು ನಾಮಪತ್ರ ಸಲ್ಲಿಕೆ ಮಾಡಲು ತೆರಳುತ್ತಿದ್ದ ವೇಳೆ ಕಿಡಿಗೇಡಿಗಳು ಅವರ ಕಾರಿನ ಗಾಜುಗಳ ಮೇಲೆ ಕಲ್ಲೆಸೆದ ಘಟನೆ ನಡೆದಿದೆ.

ಸೋಮವಾರ ನಗರದ ಎಸಿ ಕಚೇರಿ ಬಳಿ ನಡೆದ ದುಷ್ಕೃತ್ಯ ಖಂಡಿಸಿ ಮೆಣಸಿನಕಾಯಿ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದರು. ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಪೊಲೀಸ್ ಅಧಿಕಾರಿಗಳ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಗೊಳಿಸಿದರು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ. 

Byline - Ashwani

contributor

Similar News