ಟಿ.ನರಸೀಪುರ ಬಳಿ ಅಪಘಾತ: ಆಸ್ಪತ್ರೆಗೆ ಸಚಿವ ಎಚ್.ಸಿ.ಮಹದೇವಪ್ಪ ಭೇಟಿ, ಗಾಯಾಳುಗಳ ಆರೋಗ್ಯ ವಿಚಾರಣೆ

Update: 2023-06-27 09:36 GMT

ಮೈಸೂರು,ಮೇ.29: ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಕುರುಬೂರು ಬಳಿ ಭೀಕರ ರಸ್ತೆ ಸಂಬಂಧ ಸೋಮವಾರ ರಾತ್ರಿ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಚೆಲುವಾಂಬ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಈ ಘಟನೆ ದುರದೃಷ್ಟಕರವಾದದ್ದು ಹತ್ತು ಮಂದಿ ಮೃತಪಟ್ಟಿರುವುದು ಮನಸ್ಸಿಗೆ ನೋವಾಗಿದೆ. ಈಗಾಗಲೇ ಸರ್ಕಾರ ಮೃತರಿಗೆ ತಲಾ 2 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಗಾಯಾಳುಗಳಿಗೆ 50 ಸಾವಿರ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ ಸಚಿವರು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಹಾಗೂ ಅಧಿಕಾರಿಗಳು ಉಪಸ್ಧಿತರಿದ್ದರು.

Similar News