ಕೋಲಾರ: ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗೃಹರಕ್ಷಕ ದಳದ ಡೆಪ್ಯುಟಿ ಕಮಾಂಡೆಂಟ್

Update: 2023-06-27 10:57 GMT

ಕೋಲಾರ: ಲಂಚ ಪಡೆಯುವ ವೇಳೆ ಗೃಹರಕ್ಷಕ ದಳದ ಡೆಪ್ಯುಟಿ ಕಮಾಂಡೆಂಟ್​ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕೋಲಾರದ ಗೃಹರಕ್ಷಕ ದಳದ ಡೆಪ್ಯೂಟಿ ಕಮಾಂಡೆಂಟ್ ರಾಜೇಂದ್ರನ್​ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.

ಸುಬಾನಾಯಕ್​ ಎಂಬುವರನ್ನು ಬೆಂಗಳುರು ಮೆಟ್ರೋದಲ್ಲಿ ಕೆಲಸಕ್ಕೆ ನಿಯೋಜನೆ ಮಾಡಿಕೊಡಲು 6000 ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದು, ಲಂಚ ಪಡೆಯುವ ವೇಳೆ ಕೋಲಾರ ಲೋಕಾಯುಕ್ತ ಎಸ್ಪಿ ಉಮೇಶ್​ ನೇತೃತ್ವದಲ್ಲಿ ತಂಡ ಬೀಸಿದ ಬಲೆಗೆ ಗೃಹರಕ್ಷಕ ದಳದ ಡೆಪ್ಯೂಟಿ ಕಮಾಂಡೆಂಟ್​ ಬಿದ್ದಿದ್ದಾರೆ. 

ಸದ್ಯ ಆರೋಪಿಯನ್ನು ಬಂಧಿಸಿರುವ ಲೋಕಾಯುಕ್ತ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Similar News