ಔಷಧಿ ಇಲ್ಲದೆ ಆರೋಗ್ಯವಂತರಾಗಲು ಯೋಗವೇ ದಾರಿ: ಹರಿಕೃಷ್ಣ ಪುನರೂರು

Update: 2023-06-27 09:30 GMT

ಮಂಗಳೂರು:  ಔಷಧಿ ಇಲ್ಲದೆಯೂ ಆರೋಗ್ಯವಂತರಾಗಿರಲು ಯೋಗ ಮಾಡಬೇಕು, ಎಂದು ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಅಭಿಪ್ರಾಯಪಟ್ಟಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯದ ಮಾನವ ಪ್ರಜ್ಞೆ ಮತ್ತು ಯೋಗ ವಿಜ್ಞಾನ ವಿಭಾಗ, ಧರ್ಮನಿಧಿ ಯೋಗಪೀಠ ಮಂಗಳೂರು ವಿಶ್ವವಿದ್ಯಾನಿಲಯ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯ ಸಹಯೋಗದೊಂದಿಗೆ ಗುರುವಾರ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಗುರುವಾರ ಆಯೋಜಿಸಲಾಗಿದ್ದ ರಾಷ್ಟ್ರೀಯ ಯೋಗ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ  ಪ್ರಭಾರ ಕುಲಪತಿ ಪ್ರೊ. ಜಯರಾಜ್ ಅಮೀನ್, ಯೋಗ ಮಾನವನ ಆರೋಗ್ಯದ ಬೆಳವಣಿಗೆಗೆ ಮಾತ್ರವಲ್ಲದೆ ಅಧ್ಯಯನದ ದೃಷ್ಟಿ ಯಿಂದಲೂ ಅತ್ಯಂತ ಅಗತ್ಯವಾಗಿದೆ ಎಂದರು. ಪ್ರಾಂಶುಪಾಲೆ ಡಾ. ಅನಸೂಯ ರೈ  ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿ ಡಾ. ಕೆ ಕೃಷ್ಣ ಶರ್ಮ ಸ್ವಾಗತಿಸಿದರು, ವಿಶ್ವವಿದ್ಯಾನಿಲಯದ ಮಾನವ ಪ್ರಜ್ಞೆ ಮತ್ತು ಯೋಗ ವಿಜ್ಞಾನ ವಿಭಾಗದ ಉಪನ್ಯಾಸಕ ಉದಯಕುಮಾರ್ ಕೆ ವಂದಿಸಿದರು. ಪಾರ್ವತಿ ಎಂ ಜಿ ನಿರೂಪಿಸಿದರು. ಇದೇ ವೇಳೆ ಕಾಲೇಜಿನಲ್ಲಿ ಯೋಗ ಥೆರಪಿ ಕೇಂದ್ರವನ್ನು ಉದ್ಘಾಟಿಸಲಾಯಿತು.

ಒಂದು ದಿನದ ವಿಚಾರ ಸಂಕಿರಣದಲ್ಲಿ ಡಾ.ಕುನಾಲ್, ಡಾ. ಗಣಪತಿ ಜೋಯಿಸ, ಡಾ.ಪ್ರಸನ್ನ ಹೆಗ್ಡೆ, ಡಾ.ಈಶ್ವರ ಆಚಾರ್ಯ, ಡಾ.ಅನ್ನಪೂರ್ಣ ಕೆ, ಡಾ. ಸುಬ್ರಹ್ಮಣ್ಯ ಪೈಲೂರು, ಡಾ. ಕೆ . ಗಣೇಶ ಭಟ್, ಡಾ. ಧನೇಶ್ ಪಿ. ವಿ ಮುಂತಾದವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು. ಪ್ರಾಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ತಮ್ಮ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದರು.

ಸಮಾರೋಪ: ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ನಿಟ್ಟೆ ಡೀಮ್ಡ್ ವಿಶ್ವವಿದ್ಯಾನಿಲಯದ ಸಂಶೋಧನೆ ಮತ್ತು ಹಕ್ಕುಸ್ವಾಮ್ಯ ವಿಭಾಗದ ಸಲಹೆಗಾರ ಪ್ರೊ. ಐ ಕರುಣಾಸಾಗರ್, ಮತ್ತು ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ವಿಭಾಗದ ನಿರ್ದೇಶಕಿ ಪ್ರೊ. ಇಂದ್ರಾಣಿ ಕರುಣಾಸಾಗರ್ ಮುಖ್ಯ ಅತಿಥಿಯಾಗಿದ್ದರು. ಪ್ರಾಂಶುಪಾಲೆ ಡಾ. ಅನಸೂಯ ರೈ ಅಧ್ಯಕ್ಷತೆ ವಹಿಸಿದ್ದರು. 

Similar News