×
Ad

ಬೀದರ್‌: ಕಲುಷಿತ ನೀರು ಸೇವಿಸಿ 6 ಮಕ್ಕಳು ಸೇರಿದಂತೆ 20 ಜನ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Update: 2023-06-21 14:35 IST
Byline : Ashwani

ಬೀದರ್: ಕಲುಷಿತ ನೀರು ಸೇವಿಸಿ 20 ಮಂದಿ ಅಸ್ವಸ್ಥಗೊಂಡ ಘಟನೆ ಔರಾದ್ ತಾಲೂಕಿನ ಕರಿಕ್ಯಾಳ ಗ್ರಾಮದಲ್ಲಿ ಮಂಗಳವಾರ ವರದಿಯಾಗಿದೆ.  

ಕುಡಿಯುವ ನೀರಿನ ಬಾವಿಗೆ ಚರಂಡಿ ನೀರು ಸೇರಿದ್ದರಿಂದ ಈ ಘಟನೆ ನಡೆದಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. 

ಆರು ಮಕ್ಕಳು ಸೇರಿದಂತೆ ಒಟ್ಟು 20 ಜನ ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಅವರೆಲ್ಲರನ್ನೂ ಔರಾದ್‌ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಘಟನೆ ಬಗ್ಗೆ ಮಾಹಿತಿ ತಿಳಿದ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಿಸಿದರು. ಇನ್ನು ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಕರಿಕ್ಯಾಳ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

Byline - Ashwani

contributor

Similar News